ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಆರೆಂಜ್ ಆಲರ್ಟ್ ಹಿನ್ನೆಲೆಯಲ್ಲಿ ಜು. 25 ರಂದು ಅಂಗನವಾಡಿಯಿಂದ ಪದವಿಪೂರ್ವ ಕಾಲೇಜು ತನಕದ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಜಿಲ್ಲೆಗಳ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಡಿಪ್ಲೋಮಾ ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದ್ದಾರೆ.