ಬಂಟ್ವಾಳ: ಬಿ.ಸಿ.ರೋಡ್ ಬಸ್ ನಿಲ್ದಾಣ ಬಳಿ ಕಂಟೈನರ್ ಲಾರಿಯ ಚಕ್ರ ಕಳಚಿ ಉರುಳಿ ಸಮೀಪದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ತಾಗಿದ್ದು, ಗಾಯಗೊಂಡ ಪ್ರೆಸಿಲ್ಲಾ ಡಿಸೋಜ ಎಂಬವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಹಿಳೆಗೆ ತಲೆ, ಭುಜ ಮತ್ತು ಬೆನ್ನಿನ ಭಾಗಕ್ಕೆ ಗಾಯವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿ.ಸಿ.ರೋಡಿನ ಕರ್ಣಾಟಕ ಬ್ಯಾಂಕ್ ಎದುರು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಂದ ಕಂಟೇನರ್ ಲಾರಿ ಹಿಂಬದಿಯ ಚಕ್ರ ಕಳಚಿಕೊಂಡು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪ್ರೆಸಿಲ್ಲಾ ಬಿ ಡಿಸೋಜ ರವರಿಗೆ ತಾಗಿದ ಪರಿಣಾಮ ಅವರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.