ಬಂಟ್ವಾಳ: ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ಎಂಬಲ್ಲಿ ಶಾಲಾ ಬಸ್ ಮೇಲೆ ಮರ ಬಿದ್ದು ಮಗು ಸಾವನ್ನಪ್ಪಿರುವ ಘಟನೆಯ ತರುವಾಯ ಬಿ.ಸಿ.ರೋಡ್, ಬಂಟ್ವಾಳ ಸಹಿತ ಹಲವೆಡೆ ಅಪಾಯಕಾರಿ ಮರಗಳು ಮಕ್ಕಳ ಹಾಗೂ ಪ್ರಯಾಣಿಕರ ಪ್ರಾಣಕ್ಕೆರವಾಗಬಹುದು ಎಂಬ ಆತಂಕ ವನ್ನು ಸಾರ್ವಜನಿಕರು ಹೊರಹಾಕಿದ್ದಾರೆ. ಈ ನಿಟ್ಟಿನಲ್ಲಿ ಮಾಧ್ಯಮಗಳಲ್ಲಿ ವರದಿಗಳು ಪ್ರಕಟಗೊಂಡಿದ್ದು, ಇದರ ತರುವಾಯ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಂಡಿದೆ.
ಬಿ.ಸಿ.ರೋಡಿನ ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಆವರಣದಲ್ಲಿ ದೊಡ್ಡ ಮರವೊಂದು ಗೆಲ್ಲು ಚಾಚಿಕೊಂಡು ನಿಂತಿದ್ದು ಅದನ್ನು ಕಡಿಯಲಾಗಿದೆ. ಅದರ ಸಮೀಪವಿರುವ ಹೆದ್ದಾರಿಯ ವಿರುದ್ಧ ದಿಕ್ಕಿನಲ್ಲಿ ಬೃಹತ್ ಮರವೊಂದು ಇಡೀ ರಸ್ತೆಯನ್ನೇ ಆವರಿಸಿಕೊಂಡಿತ್ತು. ಇದೀಗ ಆ ಮರದ ಗೆಲ್ಲುಗಳನ್ನು ಕಡಿಯಲಾಗಿದ್ದು, ಸುಗಮ ರಸ್ತೆ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗಿದೆ.ಮೇಲಧಿಕಾರಿಗಳ ಸೂಚನೆಯಂತೆ ಅರಣ್ಯ ಇಲಾಖೆ ಶನಿವಾರ ಬೆಳಗ್ಗೆ ಈ ಕಾರ್ಯಾಚರಣೆ ನಡೆಸಿತು
OPTIC WORLD
ಬೆಳಗ್ಗೆ 6 ಗಂಟೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ಕಾರ್ಯಾಚರಣೆ ಆರಂಭಿಸಿತು. ಸಂಚಯಗಿರಿ ಮತ್ತಿತರ ಕಡೆಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿತ್ತು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಿ.ಸಿ.ರೋಡ್ :ಹೆದ್ದಾರಿಯನ್ನೇ ಆವರಿಸಿದ್ದ ಮರದ ಗೆಲ್ಲು ತೆರವು, ಸುಗಮ ಸಂಚಾರಕ್ಕೆ ಅವಕಾಶ"
Be the first to comment on "ಬಿ.ಸಿ.ರೋಡ್ :ಹೆದ್ದಾರಿಯನ್ನೇ ಆವರಿಸಿದ್ದ ಮರದ ಗೆಲ್ಲು ತೆರವು, ಸುಗಮ ಸಂಚಾರಕ್ಕೆ ಅವಕಾಶ"