ಬಂಟ್ವಾಳ: ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ಎಂಬಲ್ಲಿ ಶಾಲಾ ಬಸ್ ಮೇಲೆ ಮರ ಬಿದ್ದು ಮಗು ಸಾವನ್ನಪ್ಪಿರುವ ಘಟನೆಯ ತರುವಾಯ ಬಿ.ಸಿ.ರೋಡ್, ಬಂಟ್ವಾಳ ಸಹಿತ ಹಲವೆಡೆ ಅಪಾಯಕಾರಿ ಮರಗಳು ಮಕ್ಕಳ ಹಾಗೂ ಪ್ರಯಾಣಿಕರ ಪ್ರಾಣಕ್ಕೆರವಾಗಬಹುದು ಎಂಬ ಆತಂಕ ವನ್ನು ಸಾರ್ವಜನಿಕರು ಹೊರಹಾಕಿದ್ದಾರೆ. ಈ ನಿಟ್ಟಿನಲ್ಲಿ ಮಾಧ್ಯಮಗಳಲ್ಲಿ ವರದಿಗಳು ಪ್ರಕಟಗೊಂಡಿದ್ದು, ಇದರ ತರುವಾಯ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಂಡಿದೆ.
ಬಿ.ಸಿ.ರೋಡಿನ ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಆವರಣದಲ್ಲಿ ದೊಡ್ಡ ಮರವೊಂದು ಗೆಲ್ಲು ಚಾಚಿಕೊಂಡು ನಿಂತಿದ್ದು ಅದನ್ನು ಕಡಿಯಲಾಗಿದೆ. ಅದರ ಸಮೀಪವಿರುವ ಹೆದ್ದಾರಿಯ ವಿರುದ್ಧ ದಿಕ್ಕಿನಲ್ಲಿ ಬೃಹತ್ ಮರವೊಂದು ಇಡೀ ರಸ್ತೆಯನ್ನೇ ಆವರಿಸಿಕೊಂಡಿತ್ತು. ಇದೀಗ ಆ ಮರದ ಗೆಲ್ಲುಗಳನ್ನು ಕಡಿಯಲಾಗಿದ್ದು, ಸುಗಮ ರಸ್ತೆ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗಿದೆ. ಮೇಲಧಿಕಾರಿಗಳ ಸೂಚನೆಯಂತೆ ಅರಣ್ಯ ಇಲಾಖೆ ಶನಿವಾರ ಬೆಳಗ್ಗೆ ಈ ಕಾರ್ಯಾಚರಣೆ ನಡೆಸಿತು
ಬೆಳಗ್ಗೆ 6 ಗಂಟೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ಕಾರ್ಯಾಚರಣೆ ಆರಂಭಿಸಿತು. ಸಂಚಯಗಿರಿ ಮತ್ತಿತರ ಕಡೆಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿತ್ತು.