ಬಂಟ್ವಾಳ: ಸಂಸ್ಕಾರ ಭಾರತೀ ಕರ್ನಾಟಕ ದಕ್ಷಿಣ ಪ್ರಾಂತ, ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಆಷಾಢ ಕೃಷ್ಣ ಚತುರ್ಥಿಯ ಅಂಗವಾಗಿ ‘ನಾಟ್ಯಂ ಅವಧಾರಯೇ – ನಟರಾಜ ಪೂಜನ’ ಕಾರ್ಯಕ್ರಮವು ಆಗಸ್ಟ್ 2, 2026ರ ಭಾನುವಾರ ಮಧ್ಯಾಹ್ನ 2.30ಕ್ಕೆ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಕಾರ ಭಾರತೀ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಟಿ. ತಾರಾನಾಥ ಕೊಟ್ಟಾರಿ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಸಂಸ್ಕಾರ ಭಾರತೀ ದಕ್ಷಿಣ ಕನ್ನಡ ಜಿಲ್ಲಾ ಪ್ರದರ್ಶಕ ಕಲಾ ಸಂಯೋಜಕರಾದ ವಿದ್ವಾನ್ ದೀಪಕ್ ಕುಮಾರ್ ಪುತ್ತೂರು ಅವರು ವಿಚಾರ ಪ್ರಸ್ತುತಿಯನ್ನು ನಡೆಸಲಿದ್ದಾರೆ.
ಸಾಂಸ್ಕೃತಿಕ ಹಾಗೂ ಕಲಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಿ.ಸಿ.ರೋಡಿನಲ್ಲಿ ಸಂಸ್ಕಾರ ಭಾರತಿಯ ‘ನಟರಾಜ ಪೂಜನ’ ಕಾರ್ಯಕ್ರಮ ಆಗಸ್ಟ್ 2ರಂದು"
Be the first to comment on "ಬಿ.ಸಿ.ರೋಡಿನಲ್ಲಿ ಸಂಸ್ಕಾರ ಭಾರತಿಯ ‘ನಟರಾಜ ಪೂಜನ’ ಕಾರ್ಯಕ್ರಮ ಆಗಸ್ಟ್ 2ರಂದು"