ಬಂಟ್ವಾಳ: ಬಿ.ಸಿ.ರೋಡ್‌ನ ಶ್ರೀ ಸಾಯಿ ಕಿಡ್‌ಜೋನ್ ವಿದ್ಯಾ ಸಂಸ್ಥೆಗಳ ಆಶ್ರಯದಲ್ಲಿ ಹಾಗೂ ಸಂಸ್ಥೆಯ ರಕ್ಷಕ-ಶಿಕ್ಷಕ ಸಂಘದ ಸಹಯೋಗದೊಂದಿಗೆ ಶಾಲೆಯಲ್ಲಿ ಸಾಂಪ್ರದಾಯಿಕ ಆಟಿದ ಕೂಟ ಕಾರ್ಯಕ್ರಮ ನಡೆಯಿತು.
ನಿರೂಪಕ ದಿನೇಶ್ ಸುವರ್ಣ ರಾಯಿ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ, ಆಟಿ ತಿಂಗಳ ಮಹತ್ವ, ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಮತ್ತು ಆಚರಣೆಗಳ ಕುರಿತು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾಹಿತಿ ನೀಡಿದರು.
ಗೌರವ ಅತಿಥಿಗಳಾಗಿ ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ರವಿಚಂದ್ರ ಬಂಟ್ವಾಳ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ವೀಕ್ಷಾ ನಿಶಾಂತ್, ಉಪಾಧ್ಯಕ್ಷ ಜಿತೇಶ್ ಎನ್., ಖಜಾಂಚಿ ಗಾಯತ್ರಿ, ನಿಕಟಪೂರ್ವ ಅಧ್ಯಕ್ಷೆ ತೇಜಸ್ವಿನಿ ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಆರತಿ ಅಮೀನ್ , ಹಾಗೂ ಆಶ್ರಿತ್ ಅಮೀನ್ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕ ಐತಪ್ಪ ಪೂಜಾರಿ ವಹಿಸಿದ್ದರು.
ಶಿಕ್ಷಕಿ ಮಮತಾ ಅತಿಥಿಗಳನ್ನು ಸ್ವಾಗತಿಸಿದರು. ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು. ದಿವ್ಯಾ ವಂದಿಸಿದರು. ಶಿಕ್ಷಕಿಯರಾದ ಪುಷ್ಪಲತಾ, ಗೀತಾ ಹಾಗೂ ಅಂಬಿಕಾ ಸಹಕರಿಸಿದರು.