ಶ್ರೀನಿವಾಸವಿಶ್ವವಿದ್ಯಾಲಯ– ಇನ್‌ಸ್ಟಿಟ್ಯೂಟ್‌ ಆಫ್‌ ಕಂಪ್ಯೂಟರ್‌ ಸೈನ್ಸ್‌ ಆಂಡ್‌ ಇನ್‌ಫಾರ್ಮೇಷನ್‌ ಸೈನ್ಸ್‌, ಬಿಸಿಎ ಪುನಶ್ಚೇತನ ಕಾರ್ಯಕ್ರಮ

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ –  ವಿಶ್ವವಿದ್ಯಾಲಯಪುನಶ್ಚೇತನ ಕಾರ್ಯಕ್ರಮ ಜುಲೈ 29, 2026 ರಂದು ಮಂಗಳೂರಿನ ಪಾಂಡೇಶ್ವರದಲ್ಲಿರುವ ಹೊಸ ಕ್ಯಾಂಪಸ್ನಲ್ಲಿ  ನಡೆಯಿತು. ಈ ಕಾರ್ಯಕ್ರಮದ ಉದ್ದೇಶ ನೂತನ ಪದವಿ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾನಿಲಯದ ದೃಷ್ಟಿಕೋನ, ಶೈಕ್ಷಣಿಕ ಪರಿಸರ, ಕ್ಷೇತ್ರದಲ್ಲಿರುವ ಅವಕಾಶಗಳ ಪರಿಚಯವನ್ನು ನೀಡುವುದಾಗಿತ್ತು.

ಶ್ರೀನಿವಾಸ ವಿಶ್ವವಿದ್ಯಾಲಯ ಕುಲಾಧಿಪತಿ ಮತ್ತು ಎ. ಶಾಮರಾವ್ ಫೌಂಡೇಶನ್ ಅಧ್ಯಕ್ಷರಾದ ಡಾ. ಎ. ಶ್ರೀನಿವಾಸ ರಾವ್ ಅವರ ಮಾರ್ಗದರ್ಶನದಲ್ಲಿ ಆಯೋಜಿಸಲಾಗಿತ್ತು.

VNR GOLD

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀನಿವಾಸ ವಿಶ್ವವಿದ್ಯಾಲಯದ ಉಪಕುಲಾಧಿಪತಿ ಡಾ. ಕೆ. ಸತ್ಯನಾರಾಯಣ ರೆಡ್ಡಿ ಅವರು ವಹಿಸಿದ್ದರು. ತಮ್ಮ ಪ್ರಧಾನ ಭಾಷಣದಲ್ಲಿ ಅವರು, ವಿಶ್ವವಿದ್ಯಾಲಯದ ಪಠ್ಯಕ್ರಮ ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿಯೇ ರೂಪುಗೊಂಡಿದೆ. ಇಂದಿನ ವೇಗದ ಅಭಿವೃದ್ಧಿ ಯುಗದಲ್ಲಿ ಶೈಕ್ಷಣಿಕ ಕ್ಷೇತ್ರವು ಇಂದಿನ ಪರಿಸ್ಥಿತಿಯನ್ನು ಪುನರ್ ವಿಮರ್ಶಿಸಬೇಕಾಗಿದೆ ಎಂದು ಹೇಳಿದರು.

ಜಾಹೀರಾತು
OPTIC WORLD

ಶ್ರೀನಿವಾಸ ವಿಶ್ವವಿದ್ಯಾಲಯ ಅಭಿವೃದ್ಧಿ ರಿಜಿಸ್ಟ್ರಾರ್ ಡಾ. ಅಜಯ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಪ್ರಮಾಣ ವಚನವನ್ನು ಬೋಧಿಸುವುದರ ಜೊತೆಗೆ ವಿಶ್ವವಿದ್ಯಾನಿಲಯದ ಮೂಲಸೌಕರ್ಯಗಳು, ಶೈಕ್ಷಣಿಕ ಗುಣಮಟ್ಟ ಮತ್ತು ವಿಭಿನ್ನ ಕೋರ್ಸ್‌ಗಳ ಕುರಿತು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.

ಇನ್‌ಸ್ಟಿಟ್ಯೂಟ್‌ಆಫ್‌ ಇನ್‌ಸ್ಟಿಟ್ಯೂಟ್‌ ಆಫ್‌ ಕಂಪ್ಯೂಟರ್‌ ಸೈನ್ಸ್‌ ಆಂಡ್‌ ಇನ್‌ಫಾರ್ಮೇಷನ್‌ ಸೈನ್ಸ್‌  ಡೀನ್ ಡಾ. ಸುಬ್ರಹ್ಮಣ್ಯ ಭಟ್‌ ಸ್ವಾಗತಿಸಿ, ಎಚ್‌ಒಡಿ ಡಾ. ಶ್ರೀಧರ ಆಚಾರ್ಯ ವಂದಿಸಿದರು. ಪ್ರೊ. ರಿಯಾ ಉಪ್ಪಳ ಮತ್ತು ಪ್ರೊ. ರಾಧಿಕಾ ಮಲ್ಯ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದ ನಂತರ, ಡೀನ್ ಡಾ. ಸುಬ್ರಹ್ಮಣ್ಯ ಭಟ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಅವರು ವಿದ್ಯಾರ್ಥಿಗಳಿಗೆ ಸಂಸ್ಥೆಯನ್ನು ಪರಿಚಯಿಸುವುದರ ಜೊತೆಗೆ ಬಿಸಿಎ ಕಾರ್ಯಕ್ರಮದ ಪಠ್ಯಕ್ರಮ ಮತ್ತು ಅವಕಾಶಗಳ ಬಗ್ಗೆಯೂ ವಿವರಿಸಿದರು. ಕಾರ್ಯಕ್ರಮದಲ್ಲಿ 2026 ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಪಾಲ್ಗೊಂಡಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಶ್ರೀನಿವಾಸವಿಶ್ವವಿದ್ಯಾಲಯ– ಇನ್‌ಸ್ಟಿಟ್ಯೂಟ್‌ ಆಫ್‌ ಕಂಪ್ಯೂಟರ್‌ ಸೈನ್ಸ್‌ ಆಂಡ್‌ ಇನ್‌ಫಾರ್ಮೇಷನ್‌ ಸೈನ್ಸ್‌, ಬಿಸಿಎ ಪುನಶ್ಚೇತನ ಕಾರ್ಯಕ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*