ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ – ವಿಶ್ವವಿದ್ಯಾಲಯಪುನಶ್ಚೇತನ ಕಾರ್ಯಕ್ರಮ ಜುಲೈ 29, 2026 ರಂದು ಮಂಗಳೂರಿನ ಪಾಂಡೇಶ್ವರದಲ್ಲಿರುವ ಹೊಸ ಕ್ಯಾಂಪಸ್ನಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ದೇಶ ನೂತನ ಪದವಿ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾನಿಲಯದ ದೃಷ್ಟಿಕೋನ, ಶೈಕ್ಷಣಿಕ ಪರಿಸರ, ಕ್ಷೇತ್ರದಲ್ಲಿರುವ ಅವಕಾಶಗಳ ಪರಿಚಯವನ್ನು ನೀಡುವುದಾಗಿತ್ತು.
ಶ್ರೀನಿವಾಸ ವಿಶ್ವವಿದ್ಯಾಲಯ ಕುಲಾಧಿಪತಿ ಮತ್ತು ಎ. ಶಾಮರಾವ್ ಫೌಂಡೇಶನ್ ಅಧ್ಯಕ್ಷರಾದ ಡಾ. ಎ. ಶ್ರೀನಿವಾಸ ರಾವ್ ಅವರ ಮಾರ್ಗದರ್ಶನದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀನಿವಾಸ ವಿಶ್ವವಿದ್ಯಾಲಯದ ಉಪಕುಲಾಧಿಪತಿ ಡಾ. ಕೆ. ಸತ್ಯನಾರಾಯಣ ರೆಡ್ಡಿ ಅವರು ವಹಿಸಿದ್ದರು. ತಮ್ಮ ಪ್ರಧಾನ ಭಾಷಣದಲ್ಲಿ ಅವರು, ವಿಶ್ವವಿದ್ಯಾಲಯದ ಪಠ್ಯಕ್ರಮ ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿಯೇ ರೂಪುಗೊಂಡಿದೆ. ಇಂದಿನ ವೇಗದ ಅಭಿವೃದ್ಧಿ ಯುಗದಲ್ಲಿ ಶೈಕ್ಷಣಿಕ ಕ್ಷೇತ್ರವು ಇಂದಿನ ಪರಿಸ್ಥಿತಿಯನ್ನು ಪುನರ್ ವಿಮರ್ಶಿಸಬೇಕಾಗಿದೆ ಎಂದು ಹೇಳಿದರು.
ಶ್ರೀನಿವಾಸ ವಿಶ್ವವಿದ್ಯಾಲಯ ಅಭಿವೃದ್ಧಿ ರಿಜಿಸ್ಟ್ರಾರ್ ಡಾ. ಅಜಯ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಪ್ರಮಾಣ ವಚನವನ್ನು ಬೋಧಿಸುವುದರ ಜೊತೆಗೆ ವಿಶ್ವವಿದ್ಯಾನಿಲಯದ ಮೂಲಸೌಕರ್ಯಗಳು, ಶೈಕ್ಷಣಿಕ ಗುಣಮಟ್ಟ ಮತ್ತು ವಿಭಿನ್ನ ಕೋರ್ಸ್‌ಗಳ ಕುರಿತು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.
ಇನ್‌ಸ್ಟಿಟ್ಯೂಟ್‌ಆಫ್ ಇನ್‌ಸ್ಟಿಟ್ಯೂಟ್ ಆಫ್ ಕಂಪ್ಯೂಟರ್ ಸೈನ್ಸ್ ಆಂಡ್ ಇನ್‌ಫಾರ್ಮೇಷನ್ ಸೈನ್ಸ್ ಡೀನ್ ಡಾ. ಸುಬ್ರಹ್ಮಣ್ಯ ಭಟ್ ಸ್ವಾಗತಿಸಿ, ಎಚ್‌ಒಡಿ ಡಾ. ಶ್ರೀಧರ ಆಚಾರ್ಯ ವಂದಿಸಿದರು. ಪ್ರೊ. ರಿಯಾ ಉಪ್ಪಳ ಮತ್ತು ಪ್ರೊ. ರಾಧಿಕಾ ಮಲ್ಯ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ನಂತರ, ಡೀನ್ ಡಾ. ಸುಬ್ರಹ್ಮಣ್ಯ ಭಟ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಅವರು ವಿದ್ಯಾರ್ಥಿಗಳಿಗೆ ಸಂಸ್ಥೆಯನ್ನು ಪರಿಚಯಿಸುವುದರ ಜೊತೆಗೆ ಬಿಸಿಎ ಕಾರ್ಯಕ್ರಮದ ಪಠ್ಯಕ್ರಮ ಮತ್ತು ಅವಕಾಶಗಳ ಬಗ್ಗೆಯೂ ವಿವರಿಸಿದರು. ಕಾರ್ಯಕ್ರಮದಲ್ಲಿ 2026 ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಪಾಲ್ಗೊಂಡಿದ್ದರು.