ಬಂಟ್ವಾಳ

ಶಾಲಾ, ಕಾಲೇಜು ಆವರಣಗಳಲ್ಲಿ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ – ಆರೋಗ್ಯ ಇಲಾಖೆ ಆದೇಶ

ವಿದ್ಯಾರ್ಥಿಗಳಿಗೆ ಸುರಕ್ಷಿತ, ಗುಣಮಟ್ಟಯುತ ಹಾಗೂ ಆರೋಗ್ಯಕರ ಆಹಾರ ಲಭ್ಯವಾಗುವಂತೆ ಮಾಡಲು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ರಾಜ್ಯಾದ್ಯಂತ ಕಠಿಣ ಕ್ರಮಗಳನ್ನು ಕೈಗೊಂಡಿದೆ.

OPTIC WORLD

ಜುಲೈ 2026ರಲ್ಲಿ ರಾಜ್ಯದ 134 ಶಾಲೆಗಳು ಮತ್ತು ಕಾಲೇಜುಗಳ ಆವರಣ ಹಾಗೂ ಸುತ್ತಮುತ್ತಲಿನ ಆಹಾರ ವ್ಯಾಪಾರ ಕೇಂದ್ರಗಳಲ್ಲಿ ವಿಶೇಷ ಪರಿಶೀಲನಾ ಅಭಿಯಾನ ನಡೆಸಲಾಗಿದ್ದು, ಆಹಾರ ಪದಾರ್ಥಗಳ ಗುಣಮಟ್ಟ, ಸ್ವಚ್ಛತೆ, ನೈರ್ಮಲ್ಯ, ಲೇಬಲಿಂಗ್, ಅವಧಿ ಮೀರಿದ ಉತ್ಪನ್ನಗಳ ಮಾರಾಟ ಹಾಗೂ ಪರವಾನಗಿ/ನೋಂದಣಿ ದಾಖಲೆಗಳ ಪರಿಶೀಲನೆ ಮಾಡಲಾಗಿದೆ.

VNR GOLD

ಪರಿಶೀಲನೆಯ ವೇಳೆ ಸಂಶಯಾಸ್ಪದವಾಗಿ ಕಂಡುಬಂದ 53 ಆಹಾರ ಮಾದರಿಗಳನ್ನು ಸಂಗ್ರಹಿಸಿ, ವಿಶ್ಲೇಷಣೆಗಾಗಿ ಬೆಂಗಳೂರು ರಾಜ್ಯ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿಗಳ ಆಧಾರದ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಹಾಗೂ ನಿಯಮಗಳು 2011ರ ಅನ್ವಯ ಸಂಬಂಧಿತ ವ್ಯಾಪಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಜಾಹೀರಾತು

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಮಾರ್ಗಸೂಚಿಗಳಂತೆ, 21.07.2026 ರಿಂದ ಶಾಲೆ ಮತ್ತು ಕಾಲೇಜುಗಳ ಆವರಣ ಹಾಗೂ 50 ಮೀಟರ್ ವ್ಯಾಪ್ತಿಯಲ್ಲಿ ಅನಾರೋಗ್ಯಕರ ಆಹಾರ ಮಾರಾಟವನ್ನು ನಿರುತ್ಸಾಹಗೊಳಿಸಿ, ಆರೋಗ್ಯಕರ ಆಹಾರ ಪದ್ಧತಿಯನ್ನು ಉತ್ತೇಜಿಸಲು ಸಲಹಾ ಪ್ರಕಟಣೆ ಹೊರಡಿಸಲಾಗಿದೆ.

ಈ ಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಶಾಲಾ–ಕಾಲೇಜು ಆಡಳಿತ ಮಂಡಳಿ, ಆಹಾರ ವ್ಯಾಪಾರಿಗಳು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಇಂತಹ ಪರಿಶೀಲನಾ ಅಭಿಯಾನಗಳನ್ನು ಮುಂದುವರೆಸುವುದಾಗಿ ಇಲಾಖೆ ತಿಳಿಸಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts