ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆ ಇರುವ ಕಾರಣ ಆಗಸ್ಟ್ 1ರ ಶನಿವಾರ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜು, ಐಟಿಐ, ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಈ ವೇಳೆ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರ ವಹಿಸಬೇಕು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ.