ನೇತ್ರಾವತಿ ನದಿಯ ನೀರಿನ ಮಟ್ಟ ಬಂಟ್ವಾಳದಲ್ಲಿ ಸಂಜೆಯ ವೇಳೆ ದಿಢೀರ್ ಏರಿಕೆ ಕಂಡಿತು.
ಸುಮಾರು 5.30ರವರೆಗೆ 5.6 ಮೀಟರ್ ಎತ್ತರದಲ್ಲಿ ಹರಿಯುತ್ತಿದ್ದ ನೇತ್ರಾವತಿ, 6 ಗಂಟೆ ವೇಳೆ 7.5 ಮೀಟರ್ ಎತ್ತರದಲ್ಲಿ ಹರಿಯಲಾರಂಭಿಸಿತು. ಸುಮಾರು 6.30ರ ವೇಳೆ 7.7 ಮೀಟರ್ ಎತ್ತರದಲ್ಲಿ ಹರಿಯುತ್ತಿದ್ದು, ಇನ್ನೂ ಏರಿಕೆಯಾಗುವ ಸಂಭವವಿದೆ.
ಈ ಹಿನ್ನೆಲೆಯಲ್ಲಿ ನದಿ ತೀರದವರಿಗೆ ತಾಲೂಕು ಆಡಳಿತ ವತಿಯಿಂದ ಎಚ್ಚರಿಕೆಯನ್ನು ನೀಡಲಾಗುತ್ತಿದ್ದು, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡುವಂತೆ ಸೂಚಿಸಲಾಗಿದೆ.
ಬಡ್ಡಕಟ್ಟೆ, ಪಾಣೆಮಂಗಳೂರಿನ ಆಲಡ್ಕ ಪರಿಸರ, ಬಂಟ್ವಾಳ ಪರಿಸರದಲ್ಲಿ ನದಿ ನೀರಿನ ಮಟ್ಟ ಏರಿಕೆ ಕಂಡುಬರುತ್ತಿದೆ.