RAIN ALERT DAKSHINA KANNADA: ಭಾರೀ ಮಳೆ: ಸನ್ನದ್ಧವಾಗಿರಲು ಡಿಸಿ ಸೂಚನೆ

ಮಂಗಳೂರು: ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಅಧಿಕಾರಿಗಳು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದ್ದಾರೆ.

OPTIC WORLD

ಅವರು ಶನಿವಾರ ಈ ಸಂಬಂಧ ಅಧಿಕಾರಿಗಳೊಂದಿಗೆ  ಆನ್‍ಲೈನ್ ಸಭೆ ನಡೆಸಿ, ಮಳೆ ಅನಾಹುತಗಳನ್ನು ನಿರ್ವಹಿಸಲು ಎಲ್ಲ ತಾಲೂಕು ಆಡಳಿತಗಳು ದಿನದ 24 ಗಂಟೆಗಳ ಕಾಲವೂ ಸಾರ್ವಜನಿಕರ ಸೇವೆಗೆ ಲಭ್ಯವಾಗಬೇಕು. ಕಂಟ್ರೋಲ್ ರೂಂಗಳು ದಿನಪೂರ್ತಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

DAKSHINA KANNADA DC DARSHAN

ಜಿಲ್ಲೆಯಲ್ಲಿ ಗುಡ್ಡ ಕುಸಿತ, ಮಣ್ಣು ಜರಿತ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಈಗಾಗಲೇ ಗುರುತಿಸಿರುವ ಸಂಭಾವ್ಯ ಕುಸಿತ ಸ್ಥಳಗಳಲ್ಲಿ ನಿಗಾ ವಹಿಸಬೇಕು. ಅಗತ್ಯ ಬಿದ್ದರೆ, ಮುಂಜಾಗ್ರತಾ ಕ್ರಮವಾಗಿ ಅಪಾಯದ ಸಾಧ್ಯತೆ ಇರುವ ಮನೆಗಳಲ್ಲಿ ವಾಸಿಸುತ್ತಿರುವವರನ್ನು ಸ್ಥಳಾಂತರಿಸಬೇಕು. ಮಣ್ಣು ಜರಿಯುವ ಸಾಧ್ಯತೆಗಳಿರುವ ಸ್ಥಳಗಳಲ್ಲಿ ಮರಳು ಚೀಲಗಳನ್ನು ಇಟ್ಟು ತಾತ್ಕಾಲಿಕ ಕ್ರಮ ಕೈಗೊಳ್ಳಬೇಕು. ಖಾಸಗಿ ಜಮೀನುಗಳಲ್ಲೂ ತಾತ್ಕಾಲಿಕ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಾಹೀರಾತು
VNR GOLD

ಪ್ರಾಕೃತಿಕ ವಿಕೋಪದಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ 24 ಗಂಟೆಯೊಳಗೆ ಪರಿಹಾರ ಚೆಕ್ ನೀಡಬೇಕು. ಮಳೆ ಅನಾಹುತದಿಂದ ಸ್ಥಳಾಂತರಗೊಂಡವರಿಗೆ ಅಗತ್ಯ ಸೌಲಭ್ಯಗಳು ದೊರಕಿಸಲು ಗಮನಹರಿಸಬೇಕು. ಅಗ್ನಿಶಾಮಕ, ಎಸ್.ಡಿ.ಆರ್.ಎಫ್. ಮತ್ತು ಎನ್.ಡಿ.ಆರ್.ಎಫ್. ತಂಡಗಳು ಸದಾ ಸನ್ನದ್ಧವಾಗಿರಬೇಕು ಎಂದು ಅವರು ಸೂಚಿಸಿದರು.

 ಚಾರ್ಮಾಡಿ, ಸಂಪಾಜೆ, ಶಿರಾಡಿ ಸೇರಿದಂತೆ ಪ್ರಮುಖ ಹೆದ್ದಾರಿಗಳಲ್ಲಿ ಭೂಕುಸಿತ, ಗುಡ್ಡ ಜರಿತದಂತಹ ಪ್ರಕರಣಗಳು ಸಂಭವಿಸಿದ್ದಲ್ಲಿ ಅವುಗಳನ್ನು ತೆರವುಗೊಳಿಸಲು ತುರ್ತು ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಇದುವರೆಗೆ ಜಿಲ್ಲೆಯಲ್ಲಿ ಹೆದ್ದಾರಿ ತಡೆಯಂತಹ ಯಾವುದೇ ಪ್ರಕರಣಗಳು ವರದಿಯಾಗಿಲ್ಲ ಎಂದು ದರ್ಶನ್ ಎಚ್.ವಿ. ಹೇಳಿದರು.  ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ, ಅಪರ ಜಿಲ್ಲಾಧಿಕಾರಿ ರಾಜು ಕೆ. ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "RAIN ALERT DAKSHINA KANNADA: ಭಾರೀ ಮಳೆ: ಸನ್ನದ್ಧವಾಗಿರಲು ಡಿಸಿ ಸೂಚನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*