ಬಂಟ್ವಾಳ

UPDATE: ಬಂಟ್ವಾಳ: ರಾತ್ರಿಯಾಗುತ್ತಿದ್ದಂತೆ ಮನೆಗಳಿಗೆ ನುಗ್ಗಿ, ರಸ್ತೆಗೆ ಬಂದ ನೇತ್ರಾವತಿ

ನೇತ್ರಾವತಿ ನದಿಯ ನೀರಿನ ಮಟ್ಟ ಬಂಟ್ವಾಳದಲ್ಲಿ ಸಂಜೆಯ ವೇಳೆ ದಿಢೀರ್ ಏರಿಕೆ ಕಂಡಿದ್ದು, ರಾತ್ರಿಯಾಗುತ್ತಿದ್ದಂತೆ ರಸ್ತೆ ಪಕ್ಕ ಹರಿಯಲಾರಂಭಿಸಿದೆ. ಪಾಣೆಮಂಗಳೂರಿನ ಆಲಡ್ಕದಲ್ಲಿ ಸುಮಾರು 15 ಕುಟುಂಬಗಳು ಅಪಾಯದಲ್ಲಿದ್ದು, ಅವರ ಸ್ಥಳಾಂತರಕ್ಕೆ ಸೂಚಿಸಲಾಗಿದೆ. ಶಾಸಕ ರಾಜೇಶ್ ನಾಯ್ಕ್ ಅವರು ಈ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಈಗಾಗಲೇ 10 ಮನೆಗಳ ಮೆಟ್ಟಿಲಿನವರೆಗೆ ನೀರು ತಲುಪಿದ್ದು, ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಮುಂಜಾಗ್ರತಾ ಕ್ರಮವಾಗಿ 15 ಮನೆಗಳ ಸದಸ್ಯರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಇದರ ಜೊತೆಗೆ ತಗ್ಗುಪ್ರದೇಶಗಳಾದ  ಕಂಚಿಕಾರ್ ಪೇಟೆ, ಬಸ್ತಿಪಡ್ಪು, ಜಕ್ರಿಬೆಟ್ಟು, ಎಸ್.ವಿ.ಎಸ್.ಶಾಲಾ ಮೈದಾನ, ನಾವೂರ,ನಂದಾವರ ಸಹಿತ ಅನೇಕ ಕಡೆಗಳಲ್ಲಿ ನೀರು ತುಂಬಿ ಜಲಾವೃತವಾಗುತ್ತದೆ. ಹಾಗಾಗಿ ಅವರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

VNR GOLD

ತಾಲೂಕು ಆಡಳಿತವು ಪರಿಸ್ಥಿತಿಯನ್ನು ನಿರಂತರವಾಗಿ ಅವಲೋಕಿಸುತ್ತಿದ್ದು, ಅಗತ್ಯವಿದ್ದರೆ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಹಶೀಲ್ದಾರ್ ಮಂಜುನಾಥ್ ಹಾಗೂ ಪುರಸಭೆ ಮುಖ್ಯಾಧಿಕಾರಿ ತೀರ್ಥಪ್ರಸಾದ್ ತಿಳಿಸಿದ್ದಾರೆ ಸಂಭಾವ್ಯ ನೆರೆ ಪರಿಸ್ಥಿತಿಯನ್ನು ಎದುರಿಸಲು ಎಸ್.ವಿ.ಎಸ್. ಶಾಲೆ ಹಾಗೂ ಪಾಣೆಮಂಗಳೂರು ಶಾರದಾ ಹೈಸ್ಕೂಲ್‌ನಲ್ಲಿ ಗಂಜಿ ಕೇಂದ್ರಗಳನ್ನು ತೆರೆಯಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಪುರಸಭೆ ಮುಖ್ಯಾಧಿಕಾರಿ ತೀರ್ಥಪ್ರಸಾದ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ಅವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ತಾಲೂಕು ಕೇಂದ್ರದಲ್ಲೇ ಉಳಿದು ತುರ್ತು ಕರ್ತವ್ಯ ನಿರ್ವಹಿಸಲಿದ್ದಾರೆ. ಪಾಣೆಮಂಗಳೂರಿನ ಆಲಡ್ಕ ಪರಿಸರದಲ್ಲಿ ಸುಮಾರು 10 ಮನೆಗಳನ್ನು ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಮಾಜಿ ಸದಸ್ಯ ಸಿದ್ದೀಕ್ ಗುಡ್ಡೆಯಂಗಡಿ ತಿಳಿಸಿದ್ದಾರೆ.

ಜಾಹೀರಾತು
OPTIC WORLD
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.