ನಾಪತ್ತೆಯಾಗಿದ್ದ ಜೀವನ್ ಪಿಂಟೊ ಮೃತದೇಹ ಪತ್ತೆ

OPTIC WORLD

ಬಂಟ್ವಾಳ: ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ (೪೮) ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ ರಾತ್ರಿ ಮನೆ ಸಮೀಪ ತುಂಬಿ ಹರಿಯುತ್ತಿರುವ ತೋಡಿನ ಬಳಿ ಕಂಡುಬಂದಿದ್ದು ಅವರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾತ್ರಿಯಿಂದಲೇ ಶೋಧ ಕಾರ್ಯ ನಡೆಯುತ್ತಿತ್ತು. ಇದೀಗ ಅರಳ ಗ್ರಾಮದ ಪಂಬದಗಡ್ಡೆ ಎಂಬಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಶನಿವಾರ ರಾತ್ರಿ ಸಂಭವಿಸಿದ ಘಟನೆಯ ಬಳಿಕ ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಎನ್‌ಡಿಆರ್‌ಎಫ್  ತಂಡಗಳು ನಿರಂತರವಾಗಿ ಶೋಧ ಕಾರ್ಯಾಚರಣೆ ನಡೆಸಿದ್ದವು. ಮಳೆ ಹಾಗೂ ನೀರಿನ ಹರಿವು ಹೆಚ್ಚಿದ್ದ ಕಾರಣ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದ್ದರೂ ಶೋಧ ಮುಂದುವರಿಸಲಾಗಿತ್ತು. ಸೋಮವಾರ ಬೆಳಿಗ್ಗೆ ಅರಳ ಗ್ರಾಮದ ಪಂಬದಗದ್ದೆ ಸಮೀಪದ ನೀರಿನಲ್ಲಿ ಜೀವನ್ ಪಿಂಟೋ ಅವರ ಮೃತದೇಹ ಪತ್ತೆಯಾಗಿದೆ ಎಂದು ಎನ್‌ಡಿಆರ್‌ಎಫ್ ತಂಡ ಮಾಹಿತಿ ನೀಡಿದೆ.

VNR GOLD

ಮೃತದೇಹವನ್ನು ಮೇಲಕ್ಕೆತ್ತಿ ಮುಂದಿನ ಕಾನೂನು ಪ್ರಕ್ರಿಯೆಗಾಗಿ ಸಂಬಂಧಿತ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲದಲ್ಲಿ ನದಿ, ಹೊಳೆ ಹಾಗೂ ತೋಡುಗಳ ನೀರಿನ ಹರಿವು ಹೆಚ್ಚಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಾಗರೂಕರಾಗಿರಬೇಕು ಎಂದು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಪ್ರಕರಣದ ಕುರಿತು ಕುರಿತು ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಜಾಹೀರಾತು

ಜೀವನ್ ಪಿಂಟೋ ಅವರು ತಮ್ಮ ಮನೆಯಿಂದ ಸ್ವಲ್ಪವೇ ದೂರದಲ್ಲಿರುವ ಮಾವನ ಮನೆಗೆ ಆಗಸ್ಟ್ ೧ರ ರಾತ್ರಿ ಸುಮಾರು ೭.೩೦ರ ವೇಳೆ ನಡೆದುಕೊಂಡು ಹೋಗುವುದಾಗಿ ಹೊರಟಿದ್ದರು. ಧಾರಾಕಾರ ಮಳೆ ಹಾಗೂ ಕತ್ತಲು ಇರುವ ಹಿನ್ನೆಲೆಯಲ್ಲಿ ಟಾರ್ಚ್ ಹಿಡಿದುಕೊಂಡು ತೋಡಿನ ಮೇಲೆ ಹಾಕಲಾಗಿರುವ ಮಿನಿಸೇತುವೆ ಯ ಮೇಲೆ ನಡೆದುಕೊಂಡು ಇನ್ನೊಂದು ಬದಿಗೆ ತಲುಪಬೇಕಿತ್ತು. ಆದರೆ ಅವರು ಎಷ್ಟು ಹೊತ್ತಾದರೂ ತಲುಪದ ಹಿನ್ನೆಲೆ ಮಾಹಿತಿ ತಿಳಿದು ಹುಡುಕಾಟ ಆರಂಭಿಸಿದಾಗ, ಅವರ ಚಪ್ಪಲಿ ಮತ್ತು ಟಾರ್ಚ್ ತೋಡಿನಲ್ಲಿ ಪತ್ತೆಯಾಗಿದೆ. ಸಮೀಪವರ್ತಿಗಳನ್ನೆಲ್ಲಾ ವಿಚಾರಿಸಿ, ಹುಡುಕಾಟ ನಡೆಸಿದಾಗ ಅವರು ಕಂಡುಬಾರದ ಹಿನ್ನೆಲೆಯಲ್ಲಿ ತೋಡಿನಲ್ಲಿ ಕಾಲುಜಾರಿ ಬಿದ್ದಿರಬಹುದೇ ಎಂಬ ಶಂಕೆಯಿಂದ ಹುಡುಕಾಟ ಆರಂಭಿಸಲಾಯಿತು. ಕೂಡಲೇ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಎನ್.ಡಿ.ಆರ್.ಎಫ್. ತಂಡಕ್ಕೂ ಕರೆ ಹೋಯಿತು. ಸ್ಥಳೀಯರೂ ಸೇರಿ ರಾತ್ರಿಯಿಂದ ಭಾನುವಾರ ಸಂಜೆಯವರೆಗೂ ಹುಡುಕಾಟ ನಡೆಸಲಾಗಿತ್ತು. ಇದೀಗ ಸೋಮವಾರ ಅವರು ಶವವಾಗಿ ಪತ್ತೆಯಾಗಿದ್ದಾರೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ನಾಪತ್ತೆಯಾಗಿದ್ದ ಜೀವನ್ ಪಿಂಟೊ ಮೃತದೇಹ ಪತ್ತೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*