ಬಂಟ್ವಾಳ

ತುಂಬಿ ಹರಿಯುತ್ತಿದ್ದ ತೋಡಿಗೆ ಬಿದ್ದಿರುವ ಶಂಕೆ, ಕಣ್ಮರೆಯಾದ ವ್ಯಕ್ತಿಗೆ ಹುಡುಕಾಟ

ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ (48) ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ ರಾತ್ರಿ ಮನೆ ಸಮೀಪ ತುಂಬಿ ಹರಿಯುತ್ತಿರುವ ತೋಡಿನ ಬಳಿ ಪತ್ತೆಯಾಗಿದ್ದು, ಸದ್ಯ ಅವರು ನಾಪತ್ತೆಯಾಗಿರುವ ಕುರಿತು ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಎನ್.ಡಿ.ಆರ್.ಎಫ್. ತಂಡ ಸಹಿತ ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ ಸೇರಿ ಹುಡುಕಾಟ ನಡೆಸುತ್ತಿದ್ದು, ಸೋಮವಾರವೂ ಮುಂದುವರಿಯಲಿದೆ.

VNR GOLD

ತಮ್ಮ ಮನೆಯಿಂದ ಸ್ವಲ್ಪವೇ ದೂರದಲ್ಲಿರುವ ಮಾವನ ಮನೆಗೆ ಆಗಸ್ಟ್ 1ರ ರಾತ್ರಿ ಸುಮಾರು 7.30ರ ವೇಳೆ ನಡೆದುಕೊಂಡು ಹೋಗುವುದಾಗಿ ಹೊರಟಿದ್ದರು. ಧಾರಾಕಾರ ಮಳೆ ಹಾಗೂ ಕತ್ತಲು ಇರುವ ಹಿನ್ನೆಲೆಯಲ್ಲಿ ಟಾರ್ಚ್ ಹಿಡಿದುಕೊಂಡು ತೋಡಿನ ಮೇಲೆ ಹಾಕಲಾಗಿರುವ ಮಿನಿಸೇತುವೆ (ಸ್ಥಳೀಯ ಬಾಷೆಯಲ್ಲಿ ಪಾಪು)ಯ ಮೇಲೆ ನಡೆದುಕೊಂಡು ಇನ್ನೊಂದು ಬದಿಗೆ ತಲುಪಬೇಕಿತ್ತು.

OPTIC WORLD

ಆದರೆ ಅವರು ಎಷ್ಟು ಹೊತ್ತಾದರೂ ತಲುಪದ ಹಿನ್ನೆಲೆ ಮಾಹಿತಿ ತಿಳಿದು ಹುಡುಕಾಟ ಆರಂಭಿಸಿದಾಗ, ಅವರ ಚಪ್ಪಲಿ ಮತ್ತು ಟಾರ್ಚ್ ತೋಡಿನಲ್ಲಿ ಪತ್ತೆಯಾಗಿದೆ. ಸಮೀಪವರ್ತಿಗಳನ್ನೆಲ್ಲಾ ವಿಚಾರಿಸಿ, ಹುಡುಕಾಟ ನಡೆಸಿದಾಗ ಅವರು ಕಂಡುಬಾರದ ಹಿನ್ನೆಲೆಯಲ್ಲಿ ತೋಡಿನಲ್ಲಿ ಕಾಲುಜಾರಿ ಬಿದ್ದಿರಬಹುದೇ ಎಂಬ ಶಂಕೆಯಿಂದ ಹುಡುಕಾಟ ಆರಂಭಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಸ್ಥಳೀಯರು ಸೇರಿ ರಾತ್ರಿಯಿಂದ ಭಾನುವಾರ ಬೆಳಗಿನವರೆಗೂ ಹುಡುಕಾಟ ನಡೆಸಿದ್ದಾರೆ. ಆದರೆ ಭಾನುವಾರ ಸಂಜೆಯವರೆಗೂ ಜೀವನ್ ಪಿಂಟೋ ಸಿಕ್ಕಿಲ್ಲ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.