ಬಂಟ್ವಾಳ: ಭೂಮಿ ತಂತ್ರಾಂಶದಲ್ಲಿ ಯುನಿಕೋಡ್ ಕನ್ವರ್ಷನ್ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕು ಭೂಮಿ ಶಾಖೆಯಲ್ಲಿ ಕೆಲವು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಬಂಟ್ವಾಳ ತಹಸೀಲ್ದಾರ್ ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
VNR GOLD
ಆಗಸ್ಟ್ 3ರಿಂದ 17ರವರೆಗೆ ಬಂಟ್ವಾಳ ತಾಲೂಕು ಭೂಮಿ ಶಾಖೆಯಲ್ಲಿ ಯಾವುದೇ ರೀತಿಯ ಅರ್ಜಿ ವ್ಯವಹಾರಗಳನ್ನು ನಡೆಸಲಾಗುವುದಿಲ್ಲ. ಅಲ್ಲದೆ, ಈ ಅವಧಿಯಲ್ಲಿ ಆರ್‌ಟಿಸಿ ಹಾಗೂ ಮ್ಯುಟೇಷನ್ ಪ್ರತಿಗಳನ್ನು ಸಾರ್ವಜನಿಕರಿಗೆ ನೀಡುವುದೂ ಸಾಧ್ಯವಾಗುವುದಿಲ್ಲ ಎಂದು ತಿಳಿಸಲಾಗಿದೆ. ಯುನಿಕೋಡ್ ಕನ್ವರ್ಷನ್ ಕಾರ್ಯ ಸುಗಮವಾಗಿ ಪೂರ್ಣಗೊಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಈ ವಿಷಯವನ್ನು ಗಮನಿಸಿ ಅನಗತ್ಯವಾಗಿ ಕಚೇರಿಗೆ ಭೇಟಿ ನೀಡುವುದನ್ನು ತಪ್ಪಿಸುವಂತೆ ಕೋರಲಾಗಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "BANTWAL: ಭೂಮಿ ಶಾಖೆಯ ಸೇವೆ ತಾತ್ಕಾಲಿಕ ಸ್ಥಗಿತ – Details"
Be the first to comment on "BANTWAL: ಭೂಮಿ ಶಾಖೆಯ ಸೇವೆ ತಾತ್ಕಾಲಿಕ ಸ್ಥಗಿತ – Details"