


ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ–ಮಂಗಳೂರು, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ದಕ್ಷಿಣ ಕನ್ನಡ, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಪಶುವೈದ್ಯಕೀಯ ಮಹಾವಿದ್ಯಾಲಯ ಹಾಗೂ ಪಶುಪಾಲನ ಮಹಾವಿದ್ಯಾಲಯ ಕೊಯ್ಲ ಗೋಳ್ತಮಜಲು ಗ್ರಾಮ ಪಂಚಾಯತ್, ಆಶೀರ್ವಾದ ಸಂಜೀವಿನಿ ಒಕ್ಕೂಟ ಹಾಗೂ ಅಮ್ಟೂರು ಹಾಲು ಉತ್ಪಾದಕರ ಸಹಕಾರಿ ಸಂಘ ಸಂಯುಕ್ತ ಆಶ್ರಯದಲ್ಲಿ ಬರಡು ರಾಸುಗಳ ಚಿಕಿತ್ಸಾ ಶಿಬಿರ, ಅರಿವು ಕಾರ್ಯಕ್ರಮ ನಡೆಯಿತು.
ಸುಮಾರು 20 ಬರಡು ಹಸುಗಳನ್ನು ಒಂದೇ ಸ್ಥಳದಲ್ಲಿ ಸೇರಿಸಿ ಗೋಳ್ತಮಜಲು ಗ್ರಾಮದ ಅಮ್ಟೂರಿನ ಮೋಹನ್ ಕಟ್ಟೆಮಾರ್ ಅವರ ಮನೆ ಎದುರಿನ ಗದ್ದೆಯಲ್ಲಿ ಕಾರ್ಯಕ್ರಮ ನಡೆಯಿತು.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಡಾ .ಅರುಣ್ ಕುಮಾರ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, “ರೈತನ ಬೆವರು ಹಸುವಿನ ಹಾಲಾಗಿ ಪರಿವರ್ತನೆಯಾದಾಗ ಮಾತ್ರ ಗ್ರಾಮೀಣ ಆರ್ಥಿಕತೆ ಸದೃಢವಾಗುತ್ತದೆ. ಆದರೆ ಬರಡು ಹಸುಗಳು ರೈತರ ಕನಸಿಗೆ ತಡೆಗೋಡೆಯಾಗಿದ್ದು, ಈ ಸಮಸ್ಯೆಗೆ ವೈಜ್ಞಾನಿಕ ಪರಿಹಾರ ಒದಗಿಸುವ ಉದ್ದೇಶದಿಂದ ತಜ್ಞ ವೈದ್ಯರ ಮಾರ್ಗದರ್ಶನದೊಂದಿಗೆ ಶಿಬಿರ ಆಯೋಜಿಸಲಾಗಿದೆ ಎಂದು ಹೇಳಿದರು.
ಅಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ತಾಂತ್ರಿಕ ಕೃಷಿ ಅಧಿಕಾರಿ ಹಾಗೂ ಗೋಳ್ತಮಜಲು ಗ್ರಾಮದ ಆಡಳಿತಾಧಿಕಾರಿ ನಂದನ್ ಶೆಣೈ ವಹಿಸಿದ್ದರು.
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯನಿರ್ವಹಣಾಧಿಕಾರಿ ಜ್ಯೋತಿರಾಜ್ ಅವರು ರೈತರಿಗೆ ಬ್ಯಾಂಕ್ ಸೌಲಭ್ಯಗಳು ಹಾಗೂ ಹಣಕಾಸು ನೆರವುಗಳ ಕುರಿತು ಮಾಹಿತಿ ನೀಡಿದರು.
ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಟಿ. ಜೆ. ರಮೇಶ್, ಪಶುವೈದ್ಯಕೀಯ ಇಲಾಖೆ ಸಹಪ್ರಾಧ್ಯಾಪಕ ಡಾ. ದರ್ಣೇಶ್ ಎನ್. ಕೆ ಎಲ್, ಪಶು ವೈದ್ಯಕೀಯ ಸೇವಾ ಇಲಾಖೆ ಬಂಟ್ವಾಳದ ಸಹಾಯಕ ನಿರ್ದೇಶಕರಾದ ಡಾ. ಉಮೇಶ್ ಕಿರಣ್, ಕಲ್ಲಡ್ಕ ಪಶು ವೈದ್ಯಕೀಯ ಆಸ್ಪತ್ರೆಯ ಹಿರಿಯ ಪಶು ವೈದ್ಯಾಧಿಕಾರಿ ಡಾ. ಕಾರ್ತಿಕ್, ಕೊಯ್ಲಾ ಪಶುವೈದ್ಯಕೀಯ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ. ರಜತ್ ಸಾಗರ್ ಹಾಗೂ ಡಾ. ತೇಜಸ್ವಿನಿ ಎಂ.ಸಿ., ಗೋಳ್ತಮಜಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್, ಅಮ್ಮ್ಟೂರ್ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ್ ಶೆಟ್ಟಿ, ಆಶೀರ್ವಾದ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಿದ್ಯಾ ಜಿ. ಕೊಟ್ಟಾರಿ, ಎನ್‌ಆರ್‌ಎಲ್‌ಎಂ ಮೇಲ್ವಿಚಾರಕಿ ಕುಸುಮ, ಗೋಳ್ತಮಜಲು ಹಾಗೂ ಅಮ್ಮ್ಟೂರ್ ಗ್ರಾಮದ ಕೃತಕ ಗರ್ಭದಾರಕರು , ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.
ಶಿಬಿರದಲ್ಲಿ ಸುಮಾರು 20 ಬರಡು ಹಸುಗಳ ಸ್ಥಳದಲ್ಲಿಯೇ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಲಾಯಿತು. ಜೊತೆಗೆ ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ರೈತರಿಗೆ ಉಚಿತ ಪೌಷ್ಟಿಕಾಂಶ ಪೂರಕ ಆಹಾರ,ಹಾರ್ಮೋನ್ ಇಂಜೆಕ್ಷನ್, ಖನಿಜ ಮಿಶ್ರಣ,ಕ್ಯಾಲ್ಸಿಯಂ ಲಿಕ್ವಿಡ್, ಜಂತು ಹುಳ ನಿವಾರಣಾ ಔಷಧಿಗಳನ್ನು ವಿತರಿಸಲಾಯಿತು. ಸುಮಾರು 60ಕ್ಕೂ ಹೆಚ್ಚು ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಂಡರು .ಅಲ್ಲದೆ ಸುಮಾರು 10 ಮನೆಗಳಿಗೆ ಭೇಟಿ ನೀಡಿ ಬರಡು ರಾಸುಗಳಿಗೆ ಚಿಕಿತ್ಸೆ ನೀಡಲಾಯಿತು ಮತ್ತು ಕೃಷ್ಞಾಪುರ ಕೋಲೋನಿ ಭೇಟಿ ನೀಡಿ ರೈತರಿಗೆ ಮೇವಿನ ಬೀಜ ವಿತರಿಸಲಾಯಿತು.
ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ. ಭವಾನಿ ಪ್ರಾರ್ಥಿಸಿದರು. ಅಮ್ಮ್ಟೂರ್ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಸೌಮ್ಯ ಸ್ವಾಗತಿಸಿದರು. ಪೆರುವಾಯಿ ಗ್ರಾಮದ ಕೃಷಿ ಸಖಿ ಸವಿತಾ ಡಿ’ಸೋಜಾ ವಂದಿಸಿದರು. ಗೋಳ್ತಮಜಲು ಗ್ರಾಮದ ಕೃಷಿ ಸಖಿ ಪುಷ್ಪಾವತಿ ನಿರೂಪಿಸಿದರು.


Be the first to comment on "ಬರಡು ರಾಸುಗಳ ಚಿಕಿತ್ಸಾ ಶಿಬಿರ, ಅರಿವು ಕಾರ್ಯಕ್ರಮ"