BANTWALNEWS : B.C.ROAD CIRCLE – ರಸ್ತೆ ಅಪಘಾತಕ್ಕೆ ಸ್ಕೂಟರ್ ಸಹಸವಾರ ಬಲಿ, ಸವಾರ ಗಂಭೀರ

OPTIC WORLD

ಬಂಟ್ವಾಳ: ಬಂಟ್ವಾಳ ತಾಲೂಕಿನ ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇವರ ಪೈಕಿ ಸಹಸವಾರ ಯಶವಂತ್  ಕುಲಾಲ್ ತೀವ್ರ ಗಾಯಗಳೊಂದಿಗೆ ಅಸು ನೀಗಿದ್ದಾರೆ.  ಗಂಭೀರ ಸ್ಥಿತಿಯಲ್ಲಿದ್ದ ಸವಾರ ಗಾಯಾಳು ದಯಾನಂದ್ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟಿಪ್ಪರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕಲ್ಲಡ್ಕ ಕಡೆಯಿಂದ ಲೊರೆಟ್ಟೊ ಕಡೆಗೆ ಸಾಗುತ್ತಿದ್ದ ಟಿಪ್ಪರ್ ವಾಹನ ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆಗೆ ಹೋಗುವ ದಾರಿಯಲ್ಲಿ ಸಹ ಸವಾರನನ್ನು ಕುಳ್ಳಿರಿಸಿಕೊಂಡು ತೆರಳುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ಸರಕಾರಿ ವೆನ್‌ ಲಾಕ್‌ ಆಸ್ಪತ್ರೆಗೆ  ದಾಖಲಿಸಲಾಯಿತು. ಗಾಯಾಳುಗಳ ಪೈಕಿ ಸಹಸವಾರ ಯಶ್ವಂತ್‌ ಕುಲಾಲ್‌  ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದು, ದಯಾನಂದ ರವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಆರೋಪಿ ಚಾಲಕ ಸಲ್ಮಾನ್ ಫಾರೂಕ್ ನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

VNR GOLD

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "BANTWALNEWS : B.C.ROAD CIRCLE – ರಸ್ತೆ ಅಪಘಾತಕ್ಕೆ ಸ್ಕೂಟರ್ ಸಹಸವಾರ ಬಲಿ, ಸವಾರ ಗಂಭೀರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*