ಸರಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ಪಕ್ಷ ಕಾರ್ಯಕರ್ತರು ಮಾಡಬೇಕಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದ್ದಾರೆ.
ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಗುರುವಾರ ಬಿಜೆಪಿಯ ಬಂಟ್ವಾಳ ಮಂಡಲ ವಿಸ್ತೃತ ಕಾರ್ಯಕಾರಿಣಿ ಸಭೆಯನ್ನು ಉದ್ಭಾಟಿಸಿ ಮಾತನಾಡಿದ ಅವರು, ಎಸ್.ಐ.ಆರ್. ಪ್ರಕ್ರಿಯೆಯಲ್ಲಿ ಬಂಟ್ವಾಳ ಬಿಜೆಪಿ ಶೇ.100 ಸಾಧನೆ ಮಾಡಿದೆ, ಮೊದಲ ದಿನದಿಂದಲೇ ಉತ್ತಮ ಪ್ರತಿಕ್ರಿಯೆ ದೊರಕುತ್ತಿದೆ. ಇದಕ್ಕೆ ಬಂಟ್ವಾಳದ ಎಲ್ಲ ಕಾರ್ಯಕರ್ತರು ಸಹಕರಿಸಿದ್ದಾರೆ ಎಂದು ಶ್ಲಾಘಿಸಿದರು. ಅಂಗವಿಕಲರ ಮಾಶಾಸನ, ವಿವಿಧ ಅನುದಾನಗಳ ಕೊರತೆ ಸಹಿತ ಸರಕಾರದ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡಬೇಕಾಗಿದೆ ಎಂದು ರಾಜೇಶ್ ನಾಯ್ಕ್ ಹೇಳಿದರು.
ಬಿಜೆಪಿ ವಿಭಾಗ ಪ್ರಭಾರಿ ಭಾರತೀಶ್, ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಹಾಗೂ ಮಂಡಲ ಪ್ರಭಾರಿ ರಾಕೇಶ್ ರೈ ಕಡೆಂಜಿ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು ಉಪಸ್ಥಿತರಿದ್ದರು.
ಬಂಟ್ವಾಳ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ ಬಜ ಪ್ರಾಸ್ತಾವಿಕವಾಗಿ ಮಾತನಾಡಿ, ಎಸ್.ಐ.ಆರ್. ಪ್ರಕ್ರಿಯೆ ವಿವರ ನೀಡಿದರು. ಪ್ರಧಾನ ಕಾರ್ಯದರ್ಶಿ, ಶಿವಪ್ರಸಾದ ಶೆಟ್ಟಿ ವಂದಿಸಿದರು. ಹರೀಶ್ ಶೆಟ್ಟಿ ಪಡು ವಂದಿಸಿದರು. ಪುರುಷೋತ್ತಮ ಶೆಟ್ಟಿ ವಾಮದಪದವು ಸಹಕರಿಸಿದರು.
(more…)