ಬಂಟ್ವಾಳ

ಬಿ.ಸಿ.ರೋಡ್  ಸರ್ಕಲ್ ಸುತ್ತಮುತ್ತ ಸಂಚಾರ ವ್ಯವಸ್ಥೆ ಸುಧಾರಣೆ, ಯುವ ಮೋರ್ಚಾ ಮನವಿಯಲ್ಲೇನಿದೆ?

ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ಹೆಚ್ಚುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾದ  ಬಂಟ್ವಾಳ ವಿಧಾನಸಭಾ ಕ್ಷೇತ್ರ ಘಟಕ ಶುಕ್ರವಾರ ಬಿ.ಸಿ.ರೋಡ್ ನಲ್ಲಿರುವ ಬಂಟ್ವಾಳ ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಿಗೆ ಮನವಿ ಸಲ್ಲಿಸಿತು.

OPTIC WORLD

ಈ ಸಂದರ್ಭ ಯುವ ಮೋರ್ಚಾ ಅಧ್ಯಕ್ಷ ದಿನೇಶ್ ಶೆಟ್ಟಿ ದಂಬೆದಾರು, ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಭಂಡಾರಿಬೆಟ್ಟು ನೇತೃತ್ವದಲ್ಲಿ ಮನವಿ ನೀಡಲಾಗಿದ್ದು, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಸುರೇಶ್ ಕೋಟ್ಯಾನ್, ಪ್ರಶಾಂತ್ ಪೂಜಾರಿ, ಹೇಮಂತ್ ಶಂಭೂರು, ಗಣೇಶ್ ಪಲ್ಲಮಜಲು, ಅಶೋಕ್ ಕುಲಾಲ್ ಮರ್ದೋಳಿ,ಹಿಂಧೂ ಜಾಗರಣ ವೇಧಿಕೆ ಯ ಪ್ರಮುಖರಾದ ಪ್ರಶಾಂತ್ ಕೆಂಪುಗುಡ್ಡೆ, ಅನೂಪ್ ಮಯ್ಯ, ಶಶಿಕಾಂತ್ ಶೆಟ್ಟಿ ಆರ್ಮುಡಿ ಮತ್ತಿತರರು ಹಾಜರಿದ್ದರು. ಮನವಿಯಲ್ಲಿ ಪ್ರಸ್ತಾವಿಸಲಾದ ಅಂಶಗಳು ಇವು.

VNR GOLD

ಡಿಜಿಟಲ್ ತಂತ್ರಜ್ಞಾನ ಬಳಸಿ:

ಜಾಹೀರಾತು

ಟ್ರಾಫಿಕ್ ಪೊಲೀಸರು ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸಿ ದಾಖಲೆ ಪರಿಶೀಲನೆ ನಡೆಸುವುದು ಹಾಗೂ ದಂಡ ವಸೂಲಿ ಮಾಡುವುದು ಸಂಚಾರ ದಟ್ಟಣೆ ಮತ್ತು ಅಪಘಾತದ ಸಾಧ್ಯತೆಯನ್ನು ಹೆಚ್ಚಿಸುತ್ತಿದೆ.  ಈ ಹಿನ್ನೆಲೆಯಲ್ಲಿ ಸಿಸಿ ಕ್ಯಾಮರಾ ಸೇರಿದಂತೆ ಡಿಜಿಟಲ್ ತಂತ್ರಜ್ಞಾನ ಲಭ್ಯವಿರುವ ಹಿನ್ನೆಲೆಯಲ್ಲಿ ವಾಹನಗಳನ್ನು ನಿಲ್ಲಿಸದೆ ಡಿಜಿಟಲ್ ವ್ಯವಸ್ಥೆಯ ಮೂಲಕ ದಾಖಲೆ ಪರಿಶೀಲನೆ ಹಾಗೂ ಸಂಚಾರ ನಿಯಮ ಉಲ್ಲಂಘನೆ ಪತ್ತೆಹಚ್ಚುವ ಕ್ರಮ ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಚತುಷ್ಪಥ ರಸ್ತೆ ಶೀಘ್ರ ಪ್ರಾರಂಭಿಸಿ:

ಬಿ.ಸಿ.ರೋಡ್‌ನ ಗಾಣದಪದವುವಿನಿಂದ ಬ್ರಹ್ಮಶ್ರೀ ನಾರಾಯಣಗುರು ವೃತ್ತದವರೆಗಿನ ಚತುಷ್ಪಥ ರಸ್ತೆ ಕಾಮಗಾರಿಯನ್ನು ಶೀಘ್ರ ಆರಂಭಿಸಿ ಪೂರ್ಣಗೊಳಿಸಬೇಕು. ನಾಲ್ಕು ರಸ್ತೆಗಳು ಕೂಡುವ ಈ ವೃತ್ತದಲ್ಲಿ ಸಂಚಾರ ಸಿಗ್ನಲ್ ಅಳವಡಿಸುವ ಮೂಲಕ ವಾಹನ ಸಂಚಾರವನ್ನು ಸುಗಮಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.

ಅನಧಿಕೃತ ವ್ಯಾಪಾರ ನಿಲ್ಲಿಸಿ:

ವೃತ್ತದ ಸುತ್ತಮುತ್ತ ರಸ್ತೆ ಬದಿಯಲ್ಲಿ ಅನಧಿಕೃತ ವ್ಯಾಪಾರಗಳಿಂದ ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸಿ ಖರೀದಿ ಮಾಡುವ ಪ್ರವೃತ್ತಿ ಹೆಚ್ಚುತ್ತಿದ್ದು, ಇದರಿಂದ ಸಂಚಾರಕ್ಕೆ ಅಡಚಣೆ ಹಾಗೂ ಅಪಘಾತದ ಸಾಧ್ಯತೆ ಉಂಟಾಗುತ್ತಿದೆ. ಹೀಗಾಗಿ ಅನಧಿಕೃತ ರಸ್ತೆಬದಿ ವ್ಯಾಪಾರಿಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಮನವಿಯಲ್ಲಿ ಕೋರಲಾಗಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ವೃದ್ಧೆಯ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ ಪ್ರಕರಣ, ಮೂರು ದಿನಗಳೊಳಗೇ ಆರೋಪಿಗಳ ಬಂಧಿಸಿದ ಪೊಲೀಸರು

ಸಿಸಿ ಕ್ಯಾಮರಾ ಅಳವಡಿಸಿ, ಅಪರಿಚಿತರಿಗೆ ಬಾಗಿಲು ತೆಗೆಯಬೇಡಿ – ಪೊಲೀಸರ ಸಲಹೆ (more…)

25 minutes ago