
ತಾಲೂಕು ಪಂಚಾಯಿತಿ ಬಂಟ್ವಾಳ ಹಾಗೂ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ವತಿಯಿಂದ ಆಟಿದ ಗಮ್ಮತ್ತ್ ಕಾರ್ಯಕ್ರಮವನ್ನು ಬಿ.ಸಿ.ರೋಡಿನ ಅಂಬೇಡ್ಕರ್ ಭವನದಲ್ಲಿ ನಡೆಸಲಾಯಿತು.

ಅಧ್ಯಕ್ಷತೆಯನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷೆ ಜಯಂತಿ ವಿ. ಪೂಜಾರಿ ವಹಿಸಿ ಮಾತನಾಡಿ ಬಂಟ್ವಾಳ ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಿದ್ದು, ಉತ್ತಮ ಸಾಧನೆ ತೋರಿದೆ ಎಂದರು.

ಮಾಜಿ ಸಚಿವ ಬಿ.ರಮಾನಾಥ ರೈ, ಬುಡಾ ಅಧ್ಯಕ್ಷ ಬೇಬಿ ಕುಂದರ್, ದ.ಕ.ಜಿಲ್ಲಾ ಪಂಚಗ್ಯಾರಂಟಿ ಸಮಿತಿ ಉಪಾಧ್ಯಕ್ಷ ನಾರಾಯಣ ನಾಯ್ಕ್, ಜಿಪಂ ಯೋಜನಾ ನಿರ್ದೇಶಕ ಜಯರಾಮ,ಜಿಪಂ ಉಪಕಾರ್ಯದರ್ಶಿ ಜಯಲಕ್ಷ್ಮೀ, ಪಂಚಗ್ಯಾರಂಟಿ ಅನುಷ್ಟಾನ ಸಮಿತಿ ತಾಲೂಕು ಸದಸ್ಯರಾದ ಸುಧೀಂದ್ರ ಶೆಟ್ಟಿ, ಮಹಮ್ಮದ್ ಸಿರಾಜ್, ಸತೀಶ್, ಮುರಳೀಧರ ವೈ, ವಿನಯ ಕುಮಾರ್, ಕಾಂಚಲಾಕ್ಷಿ, ಐಡಾ ಸುರೇಶ್, ಹರ್ಷನ್ ಬಿ, ಪವಿತ್ರಾ ಕೆ, ಚಂದ್ರಶೇಖರ ಆಚಾರ್ಯ, ಅಬ್ದುಲ್ ಮಜೀದ್, ಜನಾರ್ದನ ಸಪಲ್ಯ, ಕೃಷ್ಣಪ್ಪ ಪೂಜಾರಿ, ಎನ್. ಅಬ್ದುಲ್ ಕರೀಂ ಉಪಸ್ಥಿತರಿದ್ದರು.
ಆಟಿ ತಿಂಗಳ ಮಹತ್ವ ಕುರಿತು ತುಳು ವಿದ್ವಾಂಸ ಚಂದ್ರಹಾಸ ಕಣಂತೂರು ಮಾತನಾಡಿದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್ ಪ್ರಾಸ್ತಾವಿಕ ಮಾತನಾಡಿ, ಕಾರ್ಯಕ್ರಮದ ಉದ್ದೇಶಗಳನ್ನು ವಿವರಿಸಿದರು. ಪಿಡಿಒ ಸುನಿಲ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ತಾಪಂ ಸಹಾಯಕ ನಿರ್ದೇಶಕ ವಿಶ್ವನಾಥ್ ಬಿ. ವಂದಿಸಿದರು. ಈ ಸಂದರ್ಭ ವಿವಿಧ ಖಾದ್ಯಗಳ ಪ್ರದರ್ಶನ ನಡೆಯಿತು.


Be the first to comment on "ಬಂಟ್ವಾಳದಲ್ಲಿ ಪಂಚಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಆಟಿದ ಗಮ್ಮತ್ತ್"