ಬಂಟ್ವಾಳ

ದೇಶಕ್ಕಾಗಿ ಸೇವೆ ಸಲ್ಲಿಸಲು ಸೇನೆಗೆ ಸೇರಿ: ನಿವೃತ್ತ ಯೋಧ ಗಣೇಶ್ ಕಾಮತ್

ಬಂಟ್ವಾಳ: ಹುಟ್ಟಿದವನಿಗೆ ಸಾವು ನಿಶ್ಚಿತ, ಆಯುಷ್ಯ ಮುಗಿದವನಿಗೆ ಎಲ್ಲಿದ್ದರೂ ಸಾವು ಬರುತ್ತದೆ. ಸೇನೆಗೆ ಸೇವೆಗೆ ಸೇರಿದವರು ಸಾಯುತ್ತಾರೆ ಎನ್ನುವುದು ಒಂದು ಮಿಥ್ಯಾಪವಾದ. ದೇಶಕ್ಕಾಗಿ ಸೇವೆ ಸಲ್ಲಿಸಿದ್ದೇನೆ ಎಂಬ ಸಾರ್ಥಕ ಭಾವಕ್ಕಾಗಿ ಸೇನೆಗೆ ಸೇರಿ ಎಂದು ನಿವೃತ್ತ ಯೋಧ ಹವಾಲ್ದಾರ್ ಗಣೇಶ್ ಕಾಮತ್ ಹೇಳಿದರು.

OPTIC WORLD

ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಕಾರ್ಗಿಲ್ ವಿಜಯ್ ದಿನಾಚರಣೆಯ ಅಂಗವಾಗಿ ನಡೆದ ಯೋಧ ನಮನ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡುತ್ತಿದ್ದರು.

VNR GOLD

ನಿವೃತ್ತ ಯೋಧ, ಶಾಲಾ ಸಿಬ್ಬಂದಿ ಹರೀಶ್ ದೇವಂದಬೆಟ್ಟು ಸೈನಿಕ ಕಾರ್ಯಾಚರಣೆಯ ವಿವರಗಳನ್ನು ತಿಳಿಸಿದರು. ಮುಖ್ಯ ಶಿಕ್ಷಕ ಕಮಲಾಕ್ಷ ಕಲ್ಲಡ್ಕ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಅಳುಪ ಸಮಾಜ ವಿಜ್ಞಾನ ಸಂಘದ ಕಾರ್ಯದರ್ಶಿ ಗಣ್ಯ ಎಸ್ ಪೂಜಾರಿ ಅತಿಥಿಯನ್ನು ಪರಿಚಯಿಸಿದರು. ಕಾನೂನು ಸಂಘದ ಅಧ್ಯಕ್ಷೆ ಧೃತಿ ಸ್ವಾಗತಿಸಿ, ಕಾನೂನು ಸಂಘದ ಕಾರ್ಯದರ್ಶಿ ಆದಿತ್ಯ ವಂದಿಸಿದರು. ಸಮಾಜ ವಿಜ್ಞಾನ ಸಂಘದ ಅಧ್ಯಕ್ಷರಾದ ಫಾತಿಮತ್ ಸಾಬಿರಾ ನಿರ್ವಹಿಸಿದರು

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.