ಪಚ್ಚಿನಡ್ಕದ ಓಂ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಆಟಿದ ಕೂಟ ಕಾರ್ಯಕ್ರಮ ಸಂಘದ ಶ್ರೀಕೃಷ್ಣ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಂಘದ ಮಹಾಪೋಷಕರಾದ ಚಂದ್ರಾವತಿ ಸೇಸಪ್ಪ ಕೋಟ್ಯಾನ್ ಉದ್ಘಾಟಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಸಂಘದ ಆಶ್ರಯ ದಲ್ಲಿ 2026-27 ಸಾಲಿನಲ್ಲಿ ನಡೆಯುವ ಕಾರ್ಯಕ್ರಮ ಬಗ್ಗೆ ವಿವರಿಸಿ, ಸಂಚಾಲಕರು, ಸಹಸಂಚಾಲಕರನ್ನು ಘೋಷಿಸಿದರು.
ಓಂ ಫ್ರೆಂಡ್ಸ್ ರಾಧಾಕೃಷ್ಣ ಬಾಲಗೋಕುಲದ ಅಧ್ಯಕ್ಷರಾದ ಅಮಿತಾ ವಿಶ್ವನಾಥ್ ದಾಸರಕೋಡಿ ಮಾತನಾಡಿದರು. ಸಂಘದ ಉಪಾಧ್ಯಕ್ಷರಾದ ಸದಾಶಿವ ಆಚಾರ್ಯ, ಕೋಶಾಧಿಕಾರಿ ರಾಜೇಶ್ ಆಚಾರ್ಯ, ಸಂಚಾಲಕರಾದ ಸಂತೋಷ್ ಪಚ್ಚಿನಡ್ಕ ಉಪಸ್ಥಿತರಿದ್ದರು..ಸಂಘದ ಪ್ರಧಾನ ಕಾರ್ಯದರ್ಶಿ ಚರಣ್ ರಾಜ್ ಪಚ್ಚಿನಡ್ಕ ಸ್ವಾಗತಿಸಿದರು. ಹರೀಶ್ ಶೆಟ್ಟಿ ಪಡು ಕಾರ್ಯಕ್ರಮ ನಿರೂಪಣೆ ಮಾಡಿದರು.