ಬಂಟ್ವಾಳ: ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಆಟಿದ ನೆಂಪು ಕಾರ್ಯಕ್ರಮ ನಡೆಯಿತು.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಪೆರ್ವ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಹಿರಿಯ ವಿದ್ಯಾರ್ಥಿ ಸಂದೀಪ್ ಸಾಲ್ಯಾನ್ ಆಟಿಯ ಮಹತ್ವ ತಿಳಿಸಿದರು. ಸಜೀಪಮೂಡ ಸರಕಾರಿ ಪದವಿ ಕಾಲೇಜಿನ ಪ್ರಾಂಶುಪಾಲೆ ಜೈನರಾಬಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಸೀತಾರಾಮ ಅಗೋಳಿಬೆಟ್ಟು, ದಾಮೋದರ ಮಡಿವಾಳಪಡ್ಪು, ಸಂಜೀವ ಪೂಜಾರಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉಪಪ್ರಾಂಶುಪಾಲೆ ಜ್ಯೋತಿ ಕುಮಾರಿ ಸ್ವಾಗತಿಸಿದರು. ಸಹಶಿಕ್ಷಕಿ ಸುಲೋಚನಾ ಕುಮಾರಿ ಪರಿಚಯಿಸಿದರು. ಅತಿಥಿ ಶಿಕ್ಷಕಿ ಹೇಮಾವತಿ ವಂದಿಸಿದರು. ಶಿಕ್ಷಕ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವೆಂಕಟರಮಣ ಆಚಾರ್ ಸಹಕರಿಸಿದರು. ಶಾಲಾ ವಿದ್ಯಾರ್ಥಿಗಳಿಂದ ಆಟಿಕಳಂಜ ಹಾಗೂ ನೃತ್ಯ ಕಾರ್ಯಕ್ರಮ ನಡೆಯಿತು. ಬಳಿಕ ವಿದ್ಯಾರ್ಥಿಗಳು ಮನೆಯಲ್ಲಿ ತಯಾರಿಸಿ ತಂದ ಆಟಿ ತಿಂಗಳ ಖಾದ್ಯಗಳ ಪ್ರದರ್ಶನ ಹಾಗೂ ಸಹಭೋಜನ ನಡೆಯಿತು
ಸಿಸಿ ಕ್ಯಾಮರಾ ಅಳವಡಿಸಿ, ಅಪರಿಚಿತರಿಗೆ ಬಾಗಿಲು ತೆಗೆಯಬೇಡಿ – ಪೊಲೀಸರ ಸಲಹೆ (more…)