ಕಲ್ಲಡ್ಕ

ಹಿಂದು ಜಾಗರಣಾ ವೇದಿಕೆ ವಿಟ್ಲ ತಾಲೂಕು ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆ

VNR GOLD

ಬಂಟ್ವಾಳ: ಮಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ಕಡೆ ಅಖಂಡ ಭಾರತ ಸಂಕಲ್ಪ ದಿನಾಚರಣೆ ಅಂಗವಾಗಿ ವಾಹನ ಜಾಥಾ ಮತ್ತು ಜಾಗೃತಿ ಸಭಾ ಕಾರ್ಯಕ್ರಮಗಳು ನಡೆದವು.

OPTIC WORLD

ಹಿಂದು ಜಾಗರಣಾ ವೇದಿಕೆ ವಿಟ್ಲ ತಾಲೂಕು ವತಿಯಿಂದ ವಿಟ್ಲ ತಾಲೂಕು ವತಿಯಿಂದ ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನ್ಯಾಯ ಜಾಗರಣಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಯೋಜಕ ರಾಜೇಶ್ ಬೊಳ್ಳುಕಲ್ಲು ವಹಿಸಿದ್ದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗ ಪ್ರಮುಖ್ ಕೇಶವ ಬಂಗೇರ ದಿಕ್ಸೂಚಿ ಭಾಷಣ ಮಾಡಿದರು.

ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ, ನಿವೃತ್ತ ವಾಯುಸೇನೆ ಅಧಿಕಾರಿ ಶಿವರಾಮ ಭಟ್ ಕೆದಿಲ, ಜಾಗರಣ ವೇದಿಕೆಯ ಹಿರಿಯರಾದ ರತ್ನಾಕರ ಶೆಟ್ಟಿ ಕಲ್ಲಡ್ಕ, ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಹ ಸಂಯೋಜಕ ಪುಷ್ಪರಾಜ ಕಮ್ಮಾಜೆ ಹಾಗೂ ವಿಟ್ಲ ತಾಲೂಕು ಸಂಯೋಜಕ ನವೀನ್ ಕೋಲ್ಪೆ ಉಪಸ್ಥಿತರಿದ್ದರು. ಭಾರತೀಯ ವಾಯುಸೇನೆಯಲ್ಲಿ ಕಾರ್ಯ ನಿರ್ವಹಿಸಿ ನಿವೃತ್ತರಾದ ಮಾಜಿ ಯೋಧ ಶಿವರಾಮ ಭಟ್ ಕೆ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಜಾಹೀರಾತು

ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಶಾಸಕರಾದ ರುಕ್ಮಯ ಪೂಜಾರಿ ,  ಬಿಜೆಪಿ ಕ್ಷೇತ್ರ ಮಂಡಲ ಅಧ್ಯಕ್ಷರಾಗಿರುವ ಚೆನ್ನಪ್ಪ ಕೋಟ್ಯಾನ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು, ಮಂಡಲ ಕಾರ್ಯದರ್ಶಿ ಶಿವಪ್ರಸಾದ ಶೆಟ್ಟಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಕಾರ್ಯವಾಹರಾದ ಚೇತನ್ ಕಡೇಶಿವಾಲಯ, ಹಿಂದೂ ಮುಖಂಡ ಮಿಥುನ್ ಪೂಜಾರಿ ಕಲ್ಲಡ್ಕ,  ಪ್ರಮುಖರಾದ ನಾಗೇಶ್ ಕಲ್ಲಡ್ಕ,  ಬರಿಮಾರು ಶ್ರೀ ಮಹಾಮಾಯಿ ದೇವಸ್ಥಾನದ  ಆಡಳಿತ ಮೊಕ್ತೇಸರ ರಾಕೇಶ್ ಪ್ರಭು, ಬಿಜೆಪಿಯ ಪ್ರಮುಖರಾದ ಸಂದೇಶ್ ಶೆಟ್ಟಿ ಅರೆಬೆಟ್ಟು,  ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯಕಾರಿ ಸದಸ್ಯರಾದ ಹರ್ಷ ವಿಟ್ಲ. ಸಂತೋಷ್ ಕುರಿಯಾಳ. ರಾಜೇಶ್ ಕರೋಪಾಡಿ  ಬಜರಂಗದಳದ ಕಲ್ಲಡ್ಕ ಪ್ರಖಂಡದ ಅಧ್ಯಕ್ಷರಾದ ಅಮಿತ್  ಕಲ್ಲಡ್ಕ  ಹಲವು  ಪ್ರಮುಖರು, ಕಾರ್ಯಕರ್ತರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.. ತಿಲಕ್ ಕಡೇಶಿವಾಲಯ ಸ್ವಾಗತಿಸಿದರು. ದೀಕ್ಷಿತ್ ಕಡೇಶಿವಾಲಯ ವಂದಿಸಿದರು. ದುರ್ಗಾದಾಸ್ ಕಡೇಶಿವಾಲಯ ಕಾರ್ಯಕ್ರಮ ನಿರ್ವಹಿಸಿದರು. ಸುರೇಂದ್ರ ಸಜಿಪ ಪ್ರತಿಜ್ಞಾವಿಧಿ ಬೋಧಿಸಿದರು. ಕಿಶೋರ್ ಪೆರ್ಲ ವಂದೇ ಮಾತರಂ ಹಾಡಿದರು.ಮಾಣಿ, ವೀರಕಂಭಗಳಿಂದ ವಾಹನ ಜಾಥಾ ಆಗಮಿಸಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.