ಬಂಟ್ವಾಳ

ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ‘ಆಟಿದ ಗಮ್ಮತ್’, ಜನಪದ ಸಂಪ್ರದಾಯ ಪರಿಚಯ ಅಗತ್ಯ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಬಂಟ್ವಾಳ ಬಿಜೆಪಿ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಆಟಿದ ಗಮ್ಮತ್ ಕಾರ್ಯಕ್ರಮ ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಆಟಿ ತಿಂಗಳ ವಿಶೇಷ ಆಹಾರ ಪದ್ಧತಿ, ಆಚರಣೆ ಹಾಗೂ ಜನಪದ ಸಂಪ್ರದಾಯಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯವಾಗಬೇಕು ಎಂದು ಹೇಳಿದರು.

ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹಿಳಾ ಮೋರ್ಚಾ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಮಹಿಳೆಯರ ಹೆಚ್ಚಿನ ಭಾಗವಹಿಸುವಿಕೆಯಿಂದ ಪಕ್ಷ ಸಂಘಟನೆ ಮತ್ತಷ್ಟು ಸದೃಢವಾಗಲಿದೆ ಎಂದು ತಿಳಿಸಿದರು.

ಜಾಹೀರಾತು
OPTIC WORLD

ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಆರ್. ಕೋಟ್ಯಾನ್ ಮಾತನಾಡಿ, ಸಾಂಪ್ರದಾಯಿಕ ಆಚರಣೆಗಳ ಮೂಲಕ ಸಮಾಜದಲ್ಲಿ ಪರಸ್ಪರ ಬಾಂಧವ್ಯ ಬೆಳೆಸುವ ಕೆಲಸವೂ ನಡೆಯಬೇಕು ಎಂದರು.

VNR GOLD

ರಾಜ್ಯ ಕಾರ್ಯಕಾರಿಣಿ ಸದಸ್ಯೆ ಸುಲೋಚನ ಜಿ.ಕೆ. ಭಟ್ ಅವರು ಆಟಿ ತಿಂಗಳ ವಿಶೇಷತೆ ಮತ್ತು ಮಹತ್ವದ ಬಗ್ಗೆ ಮಾಹಿತಿ ನೀಡಿದರು.

 ಜಿಲ್ಲಾ ಕಾರ್ಯದರ್ಶಿ ದೇವಪ್ಪ ಪೂಜಾರಿ, ಬಂಟ್ವಾಳ ಮಂಡಲದ ಕಾರ್ಯದರ್ಶಿಗಳಾದ ಶಿವಪ್ರಸಾದ್ ಶೆಟ್ಟಿ ಹಾಗೂ ಸುದರ್ಶನ ಬಜ, ನಾಟಿ ವೈದ್ಯ ಗಂಗಾಧರ ಪಂಡಿತ್ ಗೋಳಿಕಟ್ಟೆ, ಬಂಟ್ವಾಳ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಸವಿತಾ ಶೆಟ್ಟಿ, ಮಹಿಳಾ ಮೋರ್ಚಾ ಪ್ರಭಾರಿ ಹರ್ಷಿಣಿ ಪುಷ್ಪಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷತಾ ಉಪಸ್ಥಿತರಿದ್ದರು. ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಶ್ರೀ ಸ್ವಾಗತಿಸಿದರು. ಪುಷ್ಪಾ ಕಾಮತ್ ವಂದಿಸಿದರು. ರಜನಿ ಚಿಕ್ಕಯ್ಯಮಠ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.