ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ವತಿಯಿಂದ  ಹಿರಿಯರ ಚಿಂತನ ಸಮಾವೇಶ ಸಂಪನ್ನ

VNR GOLD
OPTIC WORLD

ಪಾಣೆಮಂಗಳೂರು ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ವತಿಯಿಂದ ಹಿರಿಯರ ಚಿಂತನ ಸಮಾವೇಶ ನಡೆಯಿತು.

ಆಡಳಿತ ಸಮಿತಿ ಅಧ್ಯಕ್ಷ ಬಿ.ರಘುನಾಥ ಸೋಮಯಾಜಿ ಉದ್ಘಾಟಿಸಿ ಮಾತನಾಡಿ, 94 ವರ್ಷಗಳ ಕಾಲ ತನ್ನ ಜೀವಿತಾ ಅವಧಿಯಲ್ಲಿ 50 ವರ್ಷಗಳ ಬಳಿಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ನರಿಕೊಂಬು ದಿ. ಕೃಷ್ಣ ಸೋಮಯಾಜಿಯವರು ಕರ್ಮಯೋಗಿಯಾಗಿ ಸಮಾಜಸೇವೆಗೆ ಆದ್ಯತೆಯನ್ನು ಕೊಟ್ಟು ಮಕ್ಕಳಲ್ಲಿಯೂ ಅದೇ ಸಂಸ್ಕಾರವನ್ನು ನೀಡಿ ಆದರ್ಶ ಪ್ರಾಯರಾಗಿದ್ದಾರೆ ಎಂದರು.

ಶ್ರೀ ರಾಮಕೃಷ್ಣ ತಪೋವನ ಪೊಳಲಿಯ ಸ್ವಾಮಿ ಚೈತನ್ಯಾನಂದಜೀ ಆಶೀರ್ವಚನ ನೀಡಿ, ಹಿರಿಯರಾದವರು ಸಮಾಜಕ್ಕೆ ಮಾರ್ಗದರ್ಶನ ಮಾಡಬೇಕು ಎಂದರು.

ಜಾಹೀರಾತು

ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷ ಪ್ರೊ. ಎ.ವಿ.ನಾರಾಯಣ ಅಧ್ಯಕ್ಷತೆ ವಹಿಸಿದ್ದರು. ಅಧ್ಯಕ್ಷ ಕೈಯೂರು ನಾರಾಯಣ ಭಟ್ ಪ್ರಾಸ್ತಾವಿಕ ಮಾತನಾಡಿದರು. ಸಂಚಾಲಕ ಭಾಸ್ಕರ ಬಾರ್ಯ ಸ್ವಾಗತಿಸಿದರು. ಸಹ ಸಂಚಾಲಕ ವೇದವ್ಯಾಸ ರಾಮಕುಂಜ , ಮಹಿಳಾ ಘಟಕದ ಸಂಚಾಲಕಿ ಪ್ರೊ. ವತ್ಸಲಾ ರಾಜ್ಞಿ ಪುತ್ತೂರು ಉಪಸ್ಥಿತರಿದ್ದರು. ಶ್ರೀಮಾತಾ ಲಕ್ಷಣೀ ಶಾಂತಿಧಾಮ ಮೇರಮಜಲು ಸಂಚಾಲಕ ಹರೀಶ್ ಪೆರ್ಗಡೆ, ನಿವೃತ್ತ ಮುಖ್ಯೋಪಾಧ್ಯಾಯರಾದ ನಾರಾಯಣ ನಾಯಕ್ ಕರ್ಪೆ ಅವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಸುಮಂಗಲಾ ಪತ್ತಿನ ಸಹಕಾರಿ ಸಂಘ ಪಾಣೆಮಂಗಳೂರು ಅಧ್ಯಕ್ಷ ನಾಗೇಶ್ ಕಲ್ಲಡ್ಕ, ಉದ್ಯಮಿ ಸಂಜೀವ ಪೂಜಾರಿ ಗುರುಕೃಪಾ ಬಿ.ಸಿ.ರೋಡು, ವ್ಯವಸ್ಥಾಪನಾ ಸಮಿತಿ ಸದಸ್ಯ ಲೋಕೇಶ್ ಉಪಸ್ಥಿತರಿದ್ದರು.

ಬಳಿಕ ನಡೆದ ಚಿಂತನ ಮಂಥನ ಗೋಷ್ಠಿಯಲ್ಲಿ ಡಾ. ರಮೀಳ ಶೇಖರ್ ಅವರು ಕೌಟುಂಬಿಕ ವ್ಯವಸ್ಥೆ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಮಾತನಾಡಿದರು.ಸೇವಾ ಭಾರತಿ ಕರ್ನಾಟಕದ ಕಾರ್ಯದರ್ಶಿ ಚೆನ್ನಯ್ಯ ಸ್ವಾಮಿ ನಶಾಮುಕ್ತ ಜಾಗೃತಿಯ ಬಗ್ಗೆ ಮಾತನಾಡಿದರು. ಕೇಶವ ಸ್ಮೃತಿ ಸಂವರ್ಧನ ಸಮಿತಿ ಮಂಗಳೂರಿನ ಗಜಾನನ ಪೈ ತೋನ್ಸೆ ಸಮಾರೋಪ ಭಾಷಣ ಮಾಡಿದರು. ಮಂಜುಳಾ ಸುಬ್ರಮಣ್ಯ ಭಟ್ ಮಂಚಿ ಮತ್ತು ಈಶ್ವರ ಭಟ್ ಗುಂಡ್ಯಡ್ಕ ಇವರಿಂದ ಗಮಕ ವಾಚನ -ವ್ಯಾಖ್ಯಾನ ಕಾರ್ಯಕ್ರಮವಿತ್ತು. ಪ್ರೊ. ರಾಜಮಣಿ ರಾಮಕುಂಜ ಯೋಗಾಸನ ಪ್ರದರ್ಶನ ಮಾಡಿದರು. ಜಯರಾಮ ಭಂಡಾರಿ ಬೆಳ್ತಂಗಡಿ ಇವರ ಪ್ರಾಯೋಜಕತ್ವದ ಬಟ್ಟೆ ಚೀಲವನ್ನು ಉಚಿತವಾಗಿ ವಿತರಿಸಲಾಯಿತು. ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ವಂದಿಸಿದರು.

ಬಂಟ್ವಾಳ ತಾಲೂಕು ಅಧ್ಯಕ್ಷ ಪ್ರೊ. ಸುಬ್ರಾಯ ರಾಮ ಮಡಿವಾಳ , ಚಂದ್ರಶೇಖರ ಆಳ್ವ ಪಡುಮಲೆ ಪುತ್ತೂರು ಹಾಗೂ ತಾಲೂಕು ಘಟಕಗಳ ಅಧ್ಯಕ್ಷರು ವೇದಿಕೆಯಲ್ಲಿ ಇದ್ದರು. ಜಯರಾಮ ಪೂಜಾರಿ , ಜಯಾನಂದ ಪೆರಾಜೆ , ಅನಾರು ಕೃಷ್ಣ ಶರ್ಮ ನಿರ್ವಹಣೆ ಮಾಡಿದರು. ಪ್ರಮುಖರಾದ ದೇವಪ್ಪ ಕುಲಾಲ್, ರಾಕೋಡಿ ಈಶ್ವರ ಭಟ್ , ರಾಜಾರಾಮ ಐತಾಳ ,ರಾಮ್‌ಗಣೇಶ್ ಪ್ರಭು ಕೈಕುಂಜೆ, ಪ್ರೇಮಲತಾ ರಾವ್ , ಶಂಕರಿ ಶರ್ಮ ಮೊದಲಾದವರು ಸಹಕರಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ವತಿಯಿಂದ  ಹಿರಿಯರ ಚಿಂತನ ಸಮಾವೇಶ ಸಂಪನ್ನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*