ಕಲ್ಲಡ್ಕದಲ್ಲಿ ಅಖಂಡ ಭಾರತ ಸಂಕಲ್ಪ ದಿನ – Details

VNR GOLD

ಬಂಟ್ವಾಳ: ಮಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ಕಡೆ ಅಖಂಡ ಭಾರತ ಸಂಕಲ್ಪ ದಿನಾಚರಣೆ ಅಂಗವಾಗಿ ವಾಹನ ಜಾಥಾ ಮತ್ತು ಜಾಗೃತಿ ಸಭಾ ಕಾರ್ಯಕ್ರಮಗಳು ನಡೆದವು.

ಹಿಂದು ಜಾಗರಣಾ ವೇದಿಕೆ ವಿಟ್ಲ ತಾಲೂಕು ವತಿಯಿಂದ ವಿಟ್ಲ ತಾಲೂಕು ವತಿಯಿಂದ ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನ್ಯಾಯ ಜಾಗರಣಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಯೋಜಕ ರಾಜೇಶ್ ಬೊಳ್ಳುಕಲ್ಲು ವಹಿಸಿದ್ದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗ ಪ್ರಮುಖ್ ಕೇಶವ ಬಂಗೇರ ದಿಕ್ಸೂಚಿ ಭಾಷಣ ಮಾಡಿದರು.

OPTIC WORLD

ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ, ನಿವೃತ್ತ ವಾಯುಸೇನೆ ಅಧಿಕಾರಿ ಶಿವರಾಮ ಭಟ್ ಕೆದಿಲ, ಜಾಗರಣ ವೇದಿಕೆಯ ಹಿರಿಯರಾದ ರತ್ನಾಕರ ಶೆಟ್ಟಿ ಕಲ್ಲಡ್ಕ, ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಹ ಸಂಯೋಜಕ ಪುಷ್ಪರಾಜ ಕಮ್ಮಾಜೆ ಹಾಗೂ ವಿಟ್ಲ ತಾಲೂಕು ಸಂಯೋಜಕ ನವೀನ್ ಕೋಲ್ಪೆ ಉಪಸ್ಥಿತರಿದ್ದರು.

ಜಾಹೀರಾತು

ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್, ಮಾಜಿ ಸಚಿವ ಎ.ರುಕ್ಮಯ ಪೂಜಾರಿ, ಕ್ಷೇತ್ರ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಅಮ್ಟೂರು, ಕ್ಷೇತ್ರ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ, ಆರೆಸ್ಸೆಸ್ ಜಿಲ್ಲಾ ಸಹಕಾರ್ಯವಾಹ ಚೇತನ್ ಕಡೇಶಿವಾಲಯ, ಪ್ರಮುಖರಾದ ಸಂದೇಶ್ ಶೆಟ್ಟಿ ಅರೆಬೆಟ್ಟು, ನಾಗೇಶ್ ಕಲ್ಲಡ್ಕ, ಮಿಥುನ್ ಪೂಜಾರಿ ಕಲ್ಲಡ್ಕ,  ಬರಿಮಾರು ದೇವಸ್ಥಾನದ ಆಡಳಿತ ಮೊಕ್ತೇಸರ ರಾಕೇಶ್ ಪ್ರಭು  ಸಹಿತ ಪ್ರಮುಖರು ಭಾಗವಹಿಸಿದ್ದರು. ತಿಲಕ್ ಕಡೇಶಿವಾಲಯ ಸ್ವಾಗತಿಸಿದರು. ದೀಕ್ಷಿತ್ ಕಡೇಶಿವಾಲಯ ವಂದಿಸಿದರು. ದುರ್ಗಾದಾಸ್ ಕಡೇಶಿವಾಲಯ ಕಾರ್ಯಕ್ರಮ ನಿರ್ವಹಿಸಿದರು. ಸುರೇಂದ್ರ ಸಜಿಪ ಪ್ರತಿಜ್ಞಾವಿಧಿ ಬೋಧಿಸಿದರು. ಕಿಶೋರ್ ಪೆರ್ಲ ವಂದೇ ಮಾತರಂ ಹಾಡಿದರು.ಮಾಣಿ, ವೀರಕಂಭಗಳಿಂದ ವಾಹನ ಜಾಥಾ ಆಗಮಿಸಿತು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕಲ್ಲಡ್ಕದಲ್ಲಿ ಅಖಂಡ ಭಾರತ ಸಂಕಲ್ಪ ದಿನ – Details"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*