ಕಲ್ಲಡ್ಕ

ಸ್ನೇಹಕ್ಕೆ ಬದ್ಧ, ಸಹಕಾರಕ್ಕೆ ಸಿದ್ಧ ಎಂಬ ತತ್ವದಡಿ ಕಾರ್ಯನಿರ್ವಹಿಸುವ ಕಲ್ಲಡ್ಕ ಸ್ನೇಹಮಿಲನ ವಾರ್ಷಿಕೋತ್ಸವ

ಬಂಟ್ವಾಳ: ಸ್ನೇಹಕ್ಕೆ ಬದ್ದ, ಸಹಕಾರಕ್ಕೆ ಸಿದ್ಧ ಧ್ಯೇಯ ವಾಕ್ಯದೊಂದಿಗೆ ಸಮಾಜಮುಖಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸ್ನೆಹ ಮಿಲನ ಕಲ್ಲಡ್ಕ 12 ನೇ ವಾರ್ಷಿಕೋತ್ಸವ ಮಂಚಿಯ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.

VNR GOLD

ನರಿಕೊಂಬು ಏರಮಲೆ ಶ್ರೀ ಕಾಡೆದಿ ಭದ್ರಕಾಳಿ ದೇವಸ್ಥಾನದ ಪ್ರಧಾನ ಅರ್ಚಕ ಕೇಶವ ಶಾಂತಿ ನರಿಕೊಂಬು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸ್ನೇಹ ಮಿಲನದ ಅಧ್ಯಕ್ಷ ರವೀಂದ್ರ ಸಪಲ್ಯ ನರಿಕೊಂಬು ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಮಾಣಿ ಗ್ರಾ.ಪಂ.ನಿಕಟ ಪೂರ್ವ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಉದ್ಯಮಿ ರವಿ.ಕೆ., ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಲೋಕನಂದ ಏಳ್ತಿಮಾರ್ ಭಾಗವಹಿಸಿದ್ದರು.

ಜಾಹೀರಾತು
OPTIC WORLD

ಸಮಾರೋಪ ಸಮಾರಂಭದಲ್ಲಿ ಹಿರಿಯ ವಕೀಲ ಶ್ರೀಧರ ಶೆಟ್ಟಿ ಪುಳಿಂಚ ಉಚಿತ ಹೃದಯ ತಪಾಸಣಾ ಶಿಬಿರದ ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು.

ಶಂಭೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ  ಪುರುಷೋತ್ತಮ ಸಾಲ್ಯಾನ್ ನರಿಕೊಂಬು ಅತಿಥಿಯಾಗಿ ಭಾಗವಹಿಸಿದ್ದರು.

ಬಂಟ್ವಾಳ ತಾಲೂಕು ಪಿಡಬ್ಲ್ಯುಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ಶುಭ ಹಾರೈಸಿದರು, ಸ್ನೇಹ ಮಿಲನದ ಅಧ್ಯಕ್ಷ ರವೀಂದ್ರ ಸಪಲ್ಯ ಅಧ್ಯಕ್ಷತೆ ವಹಿಸಿದ್ದರು. ಸುಮಂಗಲ ಕ್ರೆಡಿಟ್ ಕೋ ಅಪರೇಟಿವ್  ಸೊಸೈಟಿ ಉಪಾಧ್ಯಕ್ಷ ಸಚಿನ್ ಮೆಲ್ಕಾರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪುತ್ತೂರಿನ ಉದ್ಯಮಿ ಶೈಲೇಶ್ ಶೆಟ್ಟಿ ಹಾಗೂ  ಶ್ರುತಿ ಶೈಲೇಶ್ ದಂಪತಿಯನ್ನು ಸಾಧಕ ಸ್ನೇಹಿತ ಪುರಸ್ಕಾರ ನೀಡಿ ಗೌರವಿಸಲಾಯಿತು. ಸದಸ್ಯರಾದ ಜಯಪ್ರಕಾಶ್ ರೈ ಪ್ರಾಸ್ತಾವಿಕವಾಗಿ ಮಾತನಾಡಿ  ಸ್ವಾಗತಿಸಿದರು.‌ರಾಮ್ ಪ್ರಸಾದ್ ರೈ ತಿರುವಾಜೆ ವಂದಿಸಿದರು. ಪ್ರಭಾಕರ ಪ್ರಭು ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.