ಪುಂಜಾಲಕಟ್ಟೆ

ಕಾವಳಪಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಕಿಸಾನ್ ಗೋಷ್ಟಿ, ಇಲಾಖಾ ಸೌಲಭ್ಯ ಮಾಹಿತಿ

ಕೃಷಿ ಕೀಳಲ್ಲ, ಅದು ಬದುಕು ನೀಡುವ ಕ್ಷೇತ್ರ. ಯುವಕರು ಯಾವುದೇ ಸಂಕೋಚವಿಲ್ಲದೆ ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದ್ದಾರೆ.

VNR GOLD

ಕಾವಳಪಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ, ಬಂಟ್ವಾಳ ಹಾಗೂ ಕಾವಳಪಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಭಾಗಿತ್ವದಲ್ಲಿ 2026-27ನೇ ಸಾಲಿನ ಆತ್ಮ ಯೋಜನೆಯಡಿ ಆಯೋಜಿಸಿದ್ದ ಕಿಸಾನ್ ಗೋಷ್ಟಿ, ಇಲಾಖಾ ಸೌಲಭ್ಯ ಹಾಗೂ ಬೆಳೆ ವಿಮೆ, ಬೆಳೆ ಸಮೀಕ್ಷೆ ಮಾಹಿತಿ ಮತ್ತು ಸಾಂಕೇತಿಕ ಇಲಾಖಾ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಸಲಹಾ ಸಮಿತಿ ಅಧ್ಯಕ್ಷ ಅಬುಬಕ್ಕರ್ ಅಮ್ಮುಂಜೆ ಮಾತನಾಡಿದರು.

OPTIC WORLD

ಕರ್ನಾಟಕ ರಾಜ್ಯ ಬೀಜ ಹಾಗೂ ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಕಾವಳಪಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಮೋದ್‌ ಕುಮಾರ್  ರೈ, ನಿರ್ದೇಶಕ ಪಿ. ಜಿನರಾಜ ಅರಿಗ, ಉಪಾಧ್ಯಕ್ಷ ಅಮ್ಮು ರೈ ಹರ್ಕಾಡಿ, ಬಂಟ್ವಾಳ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಪದ್ಮರಾಜ ಬಲ್ಲಾಳ್ ಮಾವಂತೂರು, ಸಹಾಯಕ ಕೃಷಿ ನಿರ್ದೇಶಕಿ ವೀಣಾ ಕೆ.ಆರ್., ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಜೋ ಪ್ರದೀಪ್ ಡಿಸೋಜ, ಕೆವಿಕೆ ಮಂಗಳೂರು ಬೇಸಾಯ ಶಾಸ್ತ್ರ ವಿಜ್ಞಾನಿ ಡಾ. ಹರೀಶ್ ಶೆಣೈ, ವಿಟ್ಲ ಪಶು ವೈದ್ಯಾಧಿಕಾರಿ ಡಾ. ಅವಿನಾಶ್ ಭಟ್,  ಕಾವಳಪಡೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಶಿವಪ್ಪ ಗೌಡ ನಿನ್ನಿಕಲ್ಲು, ಕಾವಳಪಡೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಚನ್‌ ಕುಮಾರ್ ಹಾಗೂ ಕಾವಳಪಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಶಿವಾನಂದ ಗಟ್ಟಿ ಉಪಸ್ಥಿತರಿದ್ದರು.

ಜಾಹೀರಾತು

ಕಾರ್ಯಕ್ರಮದಲ್ಲಿ ರೈತರಿಗೆ ಇಲಾಖೆಯ ವಿವಿಧ ಸೌಲಭ್ಯಗಳು, ಬೆಳೆ ವಿಮೆ, ಬೆಳೆ ಸಮೀಕ್ಷೆ ಹಾಗೂ ಕೃಷಿ ಸಂಬಂಧಿತ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು. ರೈತರಿಗೆ ಸಾಂಕೇತಿಕವಾಗಿ ಇಲಾಖಾ ಸೌಲಭ್ಯಗಳನ್ನು ವಿತರಿಸಲಾಯಿತು.

ಜಾಹೀರಾತು
NEWSDESK

www.bantwalnews.comನಲ್ಲಿ ಪ್ರಕಟಗೊಳ್ಳುವ ಜಾಹೀರಾತುಗಳ, ಲೇಖನಗಳ ವಿಚಾರಗಳಿಗೂ ವೆಬ್ ತಾಣಕ್ಕೂ ಸಂಬಂಧವಿಲ್ಲ. ಇದು ಓದುಗರ ಗಮನಕ್ಕೆ. NOTE: : All opinions regarding the advertisments and articles published in bantwalnews and the related topic are those of the author and advertiser, and this has no relation to BantwalNews. Recommendations and suggestions provided here are left for the readers' consideration.