ಪುದು ಗ್ರಾಮ ಪಂಚಾಯಿತಿ ಹಾಗೂ ಮನಸ್ವಿನಿ ಸಂಜೀವಿನಿ ಒಕ್ಕೂಟದ ಸಹಭಾಗಿತ್ವದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಪುದು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಿತು.

ಆಟಿ ತಿಂಗಳ ಸಂಭ್ರಮವನ್ನು ಸಾಂಪ್ರದಾಯಿಕವಾಗಿ ಆಚರಿಸುವ ಉದ್ದೇಶದಿಂದ ವಿವಿಧ ಆಟಿ ತಿಂಗಳ ವಿಶೇಷ ತಿನಿಸು-ತಿಂಡಿಗಳನ್ನು ಪರಿಚಯಿಸುವುದರೊಂದಿಗೆ, ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಹಾಗೂ ಆಚರಣೆಗಳನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಯಾಗಿ ಮಾತನಾಡಿದ ಜಿ.ಪಂ. ಮಾಜಿ ಸದಸ್ಯ ಉಮ್ಮರ್ ಫಾರೂಕ್, ಆಟಿ ತಿಂಗಳು ತುಳುನಾಡಿನ ಜೀವನ ಪದ್ಧತಿ ಹಾಗೂ ಸಂಸ್ಕೃತಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದೆ. ಸಾಂಪ್ರದಾಯಿಕ ಆಹಾರ ಪದ್ಧತಿ ಹಾಗೂ ಆಚರಣೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಪುದು ಗ್ರಾಮ ಪಂಚಾಯಿತಿ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಮಾತನಾಡಿ, ಆಟಿ ತಿಂಗಳ ಆಚರಣೆ ನಮ್ಮ ನೆಲದ ಸಂಸ್ಕೃತಿ, ಪರಂಪರೆ ಹಾಗೂ ಜೀವನಶೈಲಿಯ ಪ್ರತೀಕವಾಗಿದೆ ಎಂದರು.
ಉಪಾಧ್ಯಕ್ಷೆ ರುಕ್ಸಾನಾ ಬಾನು, ಒಕ್ಕೂಟದ ಅಧ್ಯಕ್ಷೆ ವಿನಯ, ಪಂಚಾಯಿತಿ ಪಿಡಿಒ ಡಾ. ಸ್ಮೃತಿ ಯು. ಮೇರೆಮಜಲು, ಗ್ರಾ.ಪಂ. ಮಾಜಿ ಅಧ್ಯಕ್ಷೆ ವೃಂದಾ ಪೂಜಾರಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿ ಪುಟ್ಟರಾಜು ಉಪಸ್ಥಿತರಿದ್ದರು.


Be the first to comment on "ಪುದು ಗ್ರಾ.ಪಂ.ನಲ್ಲಿ ‘ಆಟಿಡೊಂಜಿ ದಿನ’"