ಬಂಟ್ವಾಳ

ಅವಘಡ ತಪ್ಪಿಸಿ ಸಮಯಪ್ರಜ್ಞೆ ಮೆರೆದ ಶಾಲಾ ಬಾಲಕ

OPTIC WORLD
VNR GOLD

ಬಂಟ್ವಾಳ: ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಬಾಲಕನೋರ್ವ ಬಿಸಿಯೂಟ ಕಾರ್ಮಿಕರು ಕರ್ತವ್ಯ ನಿರತರಾಗಿದ್ದ ವೇಳೆ ಅವಘಡ ನಡೆಯುವ ಆತಂಕವನ್ನು ಗಮನಿಸಿ ಸಮಯಪ್ರಜ್ಞೆ ಮೆರೆದು ತಪ್ಪಿಸಿದ ಘಟನೆ ಪ್ರಶಂಸೆಗೆ ಪಾತ್ರವಾಗಿದೆ. ಐದನೇ ತರಗತಿ ಬಾಲಕ ಮನ್ವಿತ್ ಸಮಯಪ್ರಜ್ಞೆ ಮೆರೆದ ವಿದ್ಯಾರ್ಥಿ.

ಶಾಲೆಯ ಅಕ್ಷರ ದಾಸೋಹದ  ಸಿಬ್ಬಂದಿ ಕೆಲಸ ಮಾಡುತ್ತಿದ್ದ ವೇಳೆ  ವಿದ್ಯುಚ್ಚಾಲಿತ ತುರಿಮಣೆ ಬಳಿ ಆಕಸ್ಮಿಕವಾಗಿ ಅವರ ಕೈಬೆರಳು ಸಿಕ್ಕಿಕೊಂಡಿದ್ದು, ಕೂಡಲೇ ಅವರು ಕಿರುಚಿದ ವೇಳೆ  ಶಾಲಾ ಅಂಗಳದಲ್ಲಿ ಆಟವಾಡುತ್ತಿದ್ದ  ಬಾಲಕ ಮನ್ವಿತ್ ವಿದ್ಯುತ್  ಸಂಪರ್ಕ ಕಡಿತಗೊಳಿಸಿ ಮತ್ತಷ್ಟು ಅನಾಹುತವನ್ನು ತಪ್ಪಿಸಿದ್ದಾನೆ. ಸ್ವಯಂನಿರ್ಧಾರದಿಂದ ಸಮಯಪ್ರಜ್ಞೆ ಮೆರೆದ ಬಾಲಕನ ಧೈರ್ಯವನ್ನು ಶಾಲಾ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಅಂಚನ್ ಮತ್ತು ಸದಸ್ಯರು ಶ್ಲಾಘಿಸಿದ್ದಾರೆ. ಶಾಲೆಗೆ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನೋಣಯ್ಯ ನಾಯ್ಕ್, ಸಿಆರ್ ಪಿ ಜ್ಯೋತಿ ಭೇಟಿ ನೀಡಿ ಬಾಲಕನ ಸಮಯಪ್ರಜ್ಞೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜಾಹೀರಾತು
ಜಾಹೀರಾತು
NEWSDESK

www.bantwalnews.comನಲ್ಲಿ ಪ್ರಕಟಗೊಳ್ಳುವ ಜಾಹೀರಾತುಗಳ, ಲೇಖನಗಳ ವಿಚಾರಗಳಿಗೂ ವೆಬ್ ತಾಣಕ್ಕೂ ಸಂಬಂಧವಿಲ್ಲ. ಇದು ಓದುಗರ ಗಮನಕ್ಕೆ. NOTE: : All opinions regarding the advertisments and articles published in bantwalnews and the related topic are those of the author and advertiser, and this has no relation to BantwalNews. Recommendations and suggestions provided here are left for the readers' consideration.

Recent Posts