ಮನ್ವಿತ್ ಸಮಯಪ್ರಜ್ಞೆಗೆ ಸಿಎಂ ಎಕ್ಸ್ ಖಾತೆಯಲ್ಲಿ ಅಭಿನಂದನೆ

ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಬಾಲಕನೋರ್ವ ಬಿಸಿಯೂಟ ಕಾರ್ಮಿಕರು ಕರ್ತವ್ಯ ನಿರತರಾಗಿದ್ದ ವೇಳೆ ಅವಘಡ ನಡೆಯುವ ಆತಂಕವನ್ನು ಗಮನಿಸಿ ಸಮಯಪ್ರಜ್ಞೆ ಮೆರೆದು ತಪ್ಪಿಸಿದ ಘಟನೆ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಯನ್ನು ಗಮನಿಸಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಕ್ಸ್ ಖಾತೆ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಶಾಲೆಯ ಅಕ್ಷರ ದಾಸೋಹದ  ಸಿಬ್ಬಂದಿ ಕೆಲಸ ಮಾಡುತ್ತಿದ್ದ ವೇಳೆ  ವಿದ್ಯುಚ್ಚಾಲಿತ ತುರಿಮಣೆ ಬಳಿ ಆಕಸ್ಮಿಕವಾಗಿ ಅವರ ಕೈಬೆರಳು ಸಿಕ್ಕಿಕೊಂಡಿದ್ದು, ಕೂಡಲೇ ಅವರು ಕಿರುಚಿದ ವೇಳೆ  5ನೇ ತರಗತಿ ಬಾಲಕ ಮನ್ವಿತ್ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಮತ್ತಷ್ಟು ಅನಾಹುತವನ್ನು ತಪ್ಪಿಸಿದ್ದಾನೆ.

VNR GOLD

ಈ ಕುರಿತು ತನ್ನ ಎಕ್ಸ್ ಖಾತೆ ಮೂಲಕ ಅಭಿನಂದನೆ ಹೇಳಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮನ್ವಿತ್‌ನ ಸಮಯಪ್ರಜ್ಞೆ ಹಾಗೂ ಧೈರ್ಯ ನಿಜಕ್ಕೂ ಹೃದಯಸ್ಪರ್ಶಿ ಮತ್ತು ಶ್ಲಾಘನೀಯ. ಅಡುಗೆ ಸಿಬ್ಬಂದಿಯನ್ನು ಅಪಾಯದಿಂದ ಕಾಪಾಡಿದ ಮನ್ವಿತ್‌ಗೆ ಹೃದಯಪೂರ್ವಕ ಅಭಿನಂದನೆಗಳು. ವಿದ್ಯುತ್‌ ಚಾಲಿತ ಕಾಯಿ ತುರಿಯುವ ಯಂತ್ರದಲ್ಲಿ ಅಕ್ಷರ ದಾಸೋಹ ಸಿಬ್ಬಂದಿಯ ಕೈಬೆರಳು ಸಿಲುಕಿಕೊಂಡು ಅವರು ನೋವಿನಿಂದ ಕಿರುಚುತ್ತಿದ್ದಾಗ, ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಾಲಕ ಮನ್ವಿತ್‌ ತಕ್ಷಣ ವಿದ್ಯುತ್‌ ಸ್ವಿಚ್‌ ಆಫ್‌ ಮಾಡುವ ಮೂಲಕ ಸಂಭವಿಸಬಹುದಾಗಿದ್ದ ದೊಡ್ಡ ಅಪಾಯವನ್ನು ತಪ್ಪಿಸಿದ್ದಾನೆ. ಬಾಲಕನ ಒಂದು ಕ್ಷಣದ ಜಾಗರೂಕತೆ, ಸರಿಯಾದ ನಿರ್ಧಾರವೊಂದು ಅಡುಗೆ ಸಿಬ್ಬಂದಿಯ ಕೈಬೆರಳನ್ನು ಉಳಿಸಿದೆ. ಮನ್ವಿತ್‌ನ ಈ ಮಾನವೀಯ ಕಾಳಜಿ, ಧೈರ್ಯ ಮತ್ತು ಸಮಯಪ್ರಜ್ಞೆ ಎಲ್ಲರಿಗೂ ಮಾದರಿಯಾಗಲಿ. ಬಾಲಕನ ಮುಂದಿನ ಭವಿಷ್ಯ ಉಜ್ವಲವಾಗಲಿ, ಸಮಾಜದ ಒಳಿತಿಗಾಗಿ ಸದಾ ಸ್ಪಂದಿಸುವ ಉತ್ತಮ ಪ್ರಜೆಯಾಗಿ ಬೆಳೆದು ನಾಡಿಗೆ ಕೀರ್ತಿ ತರಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

ಜಾಹೀರಾತು
OPTIC WORLD

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮನ್ವಿತ್ ಸಮಯಪ್ರಜ್ಞೆಗೆ ಸಿಎಂ ಎಕ್ಸ್ ಖಾತೆಯಲ್ಲಿ ಅಭಿನಂದನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*