ವಾಮದಪದವು

ವಾಮದಪದವು ಪ್ರಥಮ ದರ್ಜೆ ಕಾಲೇಜನಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಮೂಡಿಸಿದ “HOW ARE YOU”

VNR GOLD
OPTIC WORLD

ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆತ್ಮಹತ್ಯೆ ತಡೆ ಘಟಕ, ಆಪ್ತ- ಸಮಾಲೋಚನಾ ಘಟಕ ಹಾಗೂ ಸಮಾಜಕಾರ್ಯ ವಿಭಾಗದ ವತಿಯಿಂದ ಐಕ್ಯೂಎಸಿ ಸಹಯೋಗದಲ್ಲಿ ಹೌ ಆರ್ ಯೂ ಎಂಬ ಧ್ಯೇಯವಾಕ್ಯದಡಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆಯಿತು

ಮಂಗಳೂರಿನ ‘ಸಂವಾದ’ ಯುವಜನ ಸಂಪನ್ಮೂಲ ಕೇಂದ್ರದ ಸಹಭಾಗಿತ್ವದೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಯಿತು. ಯುವಜನರಲ್ಲಿ ಮಾನಸಿಕ ಕ್ಷೇಮವನ್ನು ಉತ್ತೇಜಿಸುವ ಉದ್ದೇಶ ಹೊಂದಿತ್ತು. ಕಾರ್ಯಕ್ರಮದ ನಿರೂಪಣೆಯನ್ನು ದ್ವಿತೀಯ ಬಿಎಸ್‌ಡಬ್ಲ್ಯೂ ವಿದ್ಯಾರ್ಥಿನಿ ನಿತೀಕ್ಷಾ ನಿರ್ವಹಿಸಿ, ತೃತೀಯ ಬಿಎಸ್‌ಡಬ್ಲ್ಯೂ ವಿದ್ಯಾರ್ಥಿನಿ ನಮಿತಾ ಸ್ವಾಗತಿಸಿದರು.

ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ. ಸತೀಶ ಗೌಡ ಎಂ. ಅವರು ಪ್ರಾಸ್ತಾವಿಕ ನುಡಿಗಳಲ್ಲಿ ಕಾಲೇಜಿನ ಆಪ್ತ ಸಮಾಲೋಚನಾ ಹಾಗೂ ಆತ್ಮಹತ್ಯೆ ತಡೆ ಘಟಕಗಳ ಮಹತ್ವವನ್ನು ವಿವರಿಸಿದರು.

ಜಾಹೀರಾತು

 ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಲಾಯಿತು. ಉದ್ಘಾಟನಾ ಭಾಷಣವನ್ನು ಮಂಜುಳಾ ಸುನಿಲ್ ನೆರವೇರಿಸಿದರು. ಪಬ್ಲಿಕ್ ಹೆಲ್ತ್ ಫೌಂಡೇಶನ್ ಆಫ್ ಇಂಡಿಯಾ, ಬೆಂಗಳೂರು ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಆರತಿ ರಾಜೀವ್ ಅವರು ಮಾನಸಿಕ ಒತ್ತಡ, ಆತಂಕ ಮತ್ತು ಭಾವನಾತ್ಮಕ ಸಮಸ್ಯೆಗಳನ್ನು ನಿಭಾಯಿಸುವ ವಿಧಾನಗಳ ಕುರಿತು ಚಟುವಟಿಕೆಗಳ ಮೂಲಕ ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಿನ್ಸಿಪಾಲ್ ಡಾ. ಮಹೇಶ್ ಕೆ.ಬಿ. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ವಿದ್ಯಾರ್ಥಿಗಳು ತಮ್ಮ ಮಾನಸಿಕ ಆರೋಗ್ಯದ ಬಗ್ಗೆ ಮುಕ್ತವಾಗಿ ಮಾತನಾಡುವುದನ್ನು ಸಹಜವಾಗಿಸಿಕೊಳ್ಳಬೇಕು ಎಂದರು.

ಐಕ್ಯೂಎಸಿ ಸಂಯೋಜಕ ಡಾ. ವಿಶಾಲ್ ಪಿಂಟೋ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಪ್ರೊ. ಕೊಕಿಲಾ ಎಚ್.ಎಸ್. ಹಾಗೂ ಆತ್ಮಹತ್ಯೆ ತಡೆ ಘಟಕದ ಸಂಯೋಜಕ ಡಾ. ಮಧು ಎ.ಎಸ್. ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಮಾನ್ಯತಾ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts