
ಬಂಟ್ವಾಳ ತಾಲೂಕು ಕಚೇರಿಯಲ್ಲಿ ಬಂಟ್ವಾಳ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಧ್ವಜಾರೋಹಣ ಬಳಿಕ ಮಾತನಾಡಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಯುವಜನತೆಯಿಂದ ದೇಶ ಮತ್ತಷ್ಟು ಬಲಿಷ್ಠವಾಗಲು ಸಾಧ್ಯ ಎಂದರು.

ಸಜೀಪಮೂಡ ಸರಕಾರಿ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ರಿತ್ವಿಕ್ ಪ್ರಧಾನ ಭಾಷಣ ಮಾಡಿದರು. ಬುಡಾ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ತಹಶೀಲ್ದಾರ್ ಮಂಜುನಾಥ್ ಮಾತನಾಡಿ, ಪರಿಸರ ರಕ್ಷಣೆ, ದೇಶದ ಪ್ರಗತಿಗೆ ಕೆಲಸ ಮಾಡಬೇಕಿದೆ ಎಂದರು.

ಸಮಯಪ್ರಜ್ಞೆ ಮೆರೆದು ಸಂಭವನೀಯ ಅನಾಹುತವನ್ನು ಶಾಲೆಯಲ್ಲಿ ತಪ್ಪಿಸಿದ ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮನ್ವಿತ್ ಅವರನ್ನು ಸನ್ಮಾನಿಸಿದ್ದಲ್ಲದೆ, ಆತನ ಪೋಷಕರಾದ ಸುರೇಶ್ ಮತ್ತು ಜಯಂತಿ ಅವರನ್ನು ಗೌರವಿಸಲಾಯಿತು. ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷೆ ವಿ.ಜಯಂತಿ ವಿ. ಪೂಜಾರಿ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಪ್ಪ ಉಪಸ್ಥಿತರಿದ್ದರು. ಬಂಟ್ವಾಳ ತಾಲೂಕು ಪಂಚಾಯತ್ ಇಓ ಸಚಿನ್ ಕುಮಾರ್ ಸ್ವಾಗತಿಸಿದರು. ಕಳ್ಳಿಗೆ ನೆತ್ರಕೆರೆ ದ.ಕ.ಜಿ. ಹಿ.ಪ್ರಾ.ಶಾಲೆಯ ಶಿಕ್ಷಕ ಅವಿನಾಶ್ ಡಿಸೋಜ ನಿರೂಪಿಸಿದರು.

ಉಪತಹಶೀಲ್ದಾರರಾದ ನರೇಂದ್ರನಾಥ್ ಮಿತ್ತೂರು, ನವೀನ್ ಕುಮಾರ್ ಬೆಂಜನಪದವು, ಶಿವಪ್ರಸಾದ್, ದಿವಾಕರ ಮುಗುಳಿಯ, ಆಶಿಪ್ ಇಕ್ಬಾಲ್, ಪ್ರತೀಶ್ ಹಾಗೂ ರಶ್ಮಿ ಎನ್ ಕೂಡ್ಲು, ಕಂದಾಯ ನಿರೀಕ್ಷಕರಾದ ಎಂ.ಎನ್.ರವಿ, ಪ್ರಶಾಂತ್ ಶೆಟ್ಟಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಬಂಟ್ವಾಳ ತಾಲೂಕಿನ ವಿವಿಧ ಶಾಲೆಗಳ ಮಕ್ಕಳಿಂದ ಸಾಂಸ್ಕೃತಿಕ ವೈವಿಧ್ಯಮಯ ಕಾರ್ಯಕ್ರಮಗಳು ನೆರವೇರಿತು.





Be the first to comment on "ಬಂಟ್ವಾಳ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ"