ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ನಲ್ಕೆಮಾರ್ ಶಾಲೆಯಲ್ಲಿ ಫರಂಗಿಪೇಟೆ ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ಕೆ.ಕೃಷ್ಣ ಕುಮಾರ್ ಪೂಂಜ ರಾಷ್ಟ್ರ ಧ್ವಜಾರೋಹಣ ಮಾಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ನಿವೃತ್ತ ಶಿಕ್ಷಕ ಜಯಾನಂದ ಪೆರಾಜೆ ಮುಖ್ಯ ಅತಿಥಿಯಾಗಿ ಮಾತನಾಡಿದರು. ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಕೇಶವ ಮೂರ್ತಿ,ಗ್ರಾ.ಪಂ.ಉಪಾಧ್ಯಕ್ಷೆ ಮೋಹಿನಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಜಯರಾಮ ಸಾಲಿಯಾನ್, ಉಪಸ್ಥಿತರಿದರು. ಮುಖ್ಯೋಪಾಧ್ಯಾಯಿನಿ ಜ್ಯೋತಿ ಕುಮಾರಿ ಸ್ವಾಗತಿಸಿದರು. ಸಹಶಿಕ್ಷಕಿ ರೇಖಾ ರಾವ್ ನಿರೂಪಿಸಿದರು. ಶಿಕ್ಷಕಿ ಮೋಹಿನಿ ವಂದಿಸಿದರು.ವಿದ್ಯಾರ್ಥಿಗಳು ಪಥಸಂಚಲನ ಮಾಡಿದರು.