ಬಂಟ್ವಾಳ

ಸಮಯಪ್ರಜ್ಞೆ ಮೆರೆದ ಬಾಲಕನಿಗೆ ಬಿಜೆಪಿ ಯುವಮೋರ್ಚಾ ಗೌರವ

ನರಿಕೊಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮನ್ವಿತ್, ಅಪಾಯದ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದು ಸಂಭವನೀಯ ಅನಾಹುತವನ್ನು ತಪ್ಪಿಸಿದ ಹಿನ್ನೆಲೆಯಲ್ಲಿ ಬಂಟ್ವಾಳ ಬಿಜೆಪಿ ಯುವಮೋರ್ಚಾ ವತಿಯಿಂದ ಆತನ ಮನೆಗೆ ತೆರಳಿ ಅಭಿನಂದಿಸಿ ಗೌರವಿಸಲಾಯಿತು.

VNR GOLD

ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ಸುರೇಶ್ ಕೋಟ್ಯಾನ್ ನೇತೃತ್ವದಲ್ಲಿ ಬಾಲಕನ ಮನೆಗೆ ಭೇಟಿ ನೀಡಲಾಯಿತು. ಮನ್ವಿತ್‌ನ ಧೈರ್ಯ, ಸಾಹಸ ಹಾಗೂ ಸಮಯಪ್ರಜ್ಞೆಯನ್ನು ಶ್ಲಾಘಿಸಿದ ಮುಖಂಡರು, ಇಂತಹ ಸಮಾಜಮುಖಿ ಹಾಗೂ ಸಾಹಸಮಯ ಕಾರ್ಯಗಳಿಗೆ ಮುಂದೆಯೂ ಪ್ರೇರಣೆಯಾಗಲಿ ಎಂದು ಶುಭ ಹಾರೈಸಿದರು.

OPTIC WORLD

ಈ ಸಂದರ್ಭ ಬಂಟ್ವಾಳ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ದಿನೇಶ್ ದಂಬೆದಾರು, ಪ್ರಧಾನ ಕಾರ್ಯದರ್ಶಿ ಸಂಪತ್ ಕೋಟ್ಯಾನ್, ಯುವಮೋರ್ಚಾ ಉಪಾಧ್ಯಕ್ಷರಾದ ಸಂದೀಪ್ ಪೂಜಾರಿ ಕೆಲಿಂಜ ಹಾಗೂ ಕಾರ್ತಿಕ್ ಬಲ್ಲಾಳ್, ಕಾರ್ಯದರ್ಶಿ ಹೇಮಂತ್ ಶಂಬೂರ್, ನರಿಕೊಂಬು ನಿಕಟಪೂರ್ವ ಪಂಚಾಯಿತಿ ಸದಸ್ಯರಾದ ಕಿಶೋರ್ ಶೆಟ್ಟಿ, ಪ್ರೇಮನಂದ ಶೆಟ್ಟಿ, ವಿಜಯ್ ರೈ ಆಲದಪದವು, ಎಸ್‌ಡಿಎಂಸಿ ಅಧ್ಯಕ್ಷ ರವಿ ಅಂಚನ್, ಶ್ರೀಶ ರಾಯಸ, ಮೋಹನ್ ದರ್ಕಸ್ ಹಾಗೂ ರಂಜಿತ್ ಕೆದ್ಧೆಲು, ಮನ್ವಿತ್ ತಂದೆ, ತಾಯಿಯರಾದ ಸುರೇಶ್ ಮತ್ತು ಜಯಂತಿ ಉಪಸ್ಥಿತರಿದ್ದರು.

ಜಾಹೀರಾತು
ಉಮೇಶ್ ಬೊಳಂತೂರು
ಲಾದ್ರು ಮಿನೇಜಸ್
ಎ.ಬಿ.ಅಬ್ದುಲ್ಲಾ ಕೊಳ್ನಾಡು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts