ಬಂಟ್ವಾಳ

ಸಿದ್ದಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಿಂದ ರೂ 3.80 ಲಕ್ಷ ರೈತ ಕಲ್ಯಾಣ ನಿಧಿ ವಿತರಣೆ

OPTIC WORLD

ಸಿದ್ದಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಸದಸ್ಯರಾಗಿ ಬೆಳೆಸಾಲ ಪಡೆದು ಮೃತರಾದ ಸದಸ್ಯರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ರೈತ ಕಲ್ಯಾಣ ನಿಧಿ ಯೋಜನೆಯಡಿಯಲ್ಲಿ ಮರಣ ಹೊಂದಿದ 38  ಕುಟುಂಬದ ನಾಮಿನಿ ಸದಸ್ಯರುಗಳಿಗೆ ತಲಾ ರೂ.10 ಸಾವಿರದಂತೆ ರೂ.3.80 ಲಕ್ಷ ರೈತ ಕಲ್ಯಾಣ ನಿಧಿ ವಿತರಿಸಲಾಯಿತು.

VNR GOLD

ಸಂಘದ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ  ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಉಪಾಧ್ಯಕ್ಷ ಸಂದೇಶ ಶೆಟ್ಟಿ ವಿತರಣೆ ಮಾಡಿದರು.

D.SHIVA BHAT JWELLERS

ಈ ಸಂದರ್ಭ ಮಾತನಾಡಿದ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು , ಬೆಳೆ ಸಾಲ ಪಡೆದುಕೊಂಡು ಸಂಘದಲ್ಲಿ ವ್ಯವಹಾರ ಮಾಡಿಕೊಂಡು ಬರುತ್ತಿದ್ದ ರೈತ ಸದಸ್ಯರು ಮರಣ ಹೊಂದಿದಾಗ ಕುಟುಂಬಕ್ಕೆ ಆರ್ಥಿಕ ಸಹಕಾರ ನೀಡುವ ಉದ್ದೇಶದಿಂದ ಸಂಘವು ರೈತ ಕಲ್ಯಾಣ ನಿಧಿ ಯೋಜನೆಯನ್ನು ಸ್ಥಾಪಿಸಿ , ಸದ್ರಿ ಯೋಜನೆಯಡಿಯಲ್ಲಿ ಮೃತ ಸದಸ್ಯರ ಕುಟುಂಬಕ್ಕೆ  ಸಹಾಯ ಮಾಡುತ್ತಿದೆ ಎಂದು ತಿಳಿಸಿದರು.

ಜಾಹೀರಾತು

ನಿರ್ದೇಶಕರಾದ ಸತೀಶ್ ಪೂಜಾರಿ ಅಲಕ್ಕೆ , ದಿನೇಶ್ ಪೂಜಾರಿ ,ರಶ್ಮಿತ್ ಶೆಟ್ಟಿ,ಚಂದ್ರಶೇಖರ ಶೆಟ್ಟಿ , ಜಾರಪ್ಪ ನಾಯ್ಕ, ವೀರಪ್ಪ ಪರವ , ವಿಶ್ವನಾಥ ಶೆಟ್ಟಿಗಾರ್ , ಎ ಶಿವ ಗೌಡ , ರಾಜೇಶ್ ಶೆಟ್ಟಿ ಕೊನೆರಬೆಟ್ಟು, ನವೀನ ಹೆಗ್ಡೆ,ಮಂದಾರತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಆರ್ ಹಾಗೂ ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.