ಬಂಟ್ವಾಳ ಕ್ಷೇತ್ರದಲ್ಲಿ 11,196 ಮಂದಿಗೆ ಪಿಂಚಣಿ ಸ್ಥಗಿತ: ಶಾಸಕ ರಾಜೇಶ್ ನಾಯ್ಕ್ ಪ್ರಶ್ನೆಗೆ ಡಿಸಿಎಂ ಉತ್ತರ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ಸಂಬಂಧಿಸಿದಂತೆ ವಿವಿಧ ಕಾರಣಗಳಿಂದ ಒಟ್ಟು 11,196 ಮಂದಿಗೆ ಪಿಂಚಣಿ ಸ್ಥಗಿತಗೊಳಿಸಲಾಗಿದೆ.

OPTIC WORLD

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ವಿಧಾನಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉಪಮುಖ್ಯಮಂತ್ರಿ ಜ.ಪರಮೇಶ್ವರ್ ಅವರು ಈ ಉತ್ತರ ನೀಡಿದ್ದಾರೆ.

VNR GOLD

ಕ್ಷೇತ್ರದಲ್ಲಿವಿವಿಧ ಕಾರಣಗಳಿಂದ ಒಟ್ಟು 11,196 ಪಿಂಚಣಿ ಪ್ರಕರಣಗಳನ್ನು ಸ್ಥಗಿತಗೊಳಿಸಲು ಗುರುತಿಸಲಾಗಿದೆ. ಈ ಪೈಕಿ 5,243 ಪ್ರಕರಣಗಳು ಇ ಜನ್ಮ ದಾಖಲೆಯ ಆಧಾರದ ಮೇಲೆ ಮರಣ ಹೊಂದಿದವರು, 3,399 ಮರಣ ಪ್ರಕರಣಗಳು, 684 ಶಾಶ್ವತ ವಲಸೆ, 565 ಬಹು ಪ್ರಯೋಜನ ಪಡೆಯುತ್ತಿರುವ ಪ್ರಕರಣಗಳು ಹಾಗೂ 286 ವಿಎಒ ಪರಿಶೀಲನೆಯಲ್ಲಿ ಅನರ್ಹ ಎಂದು ಗುರುತಿಸಲಾಗಿದೆ ಎಂದು ಉತ್ತರದಲ್ಲಿ ತಿಳಿಸಲಾಗಿದೆ.

ಜಾಹೀರಾತು

ಇದಲ್ಲದೆ, 813 ಇತರೆ ಪ್ರಕರಣಗಳು, 168 ಆದಾಯ ಹೆಚ್ಚಳ ಮತ್ತು 38 ಮರುಮದುವೆ ಪ್ರಕರಣಗಳು ಸಹ ಸ್ಥಗಿತಕ್ಕೆ ಗುರುತಿಸಲಾದ ಪಟ್ಟಿಯಲ್ಲಿ ಸೇರಿವೆ.ಕ್ಷೇತ್ರದಲ್ಲಿ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಡಿ ಒಟ್ಟು 37,291 ಫಲಾನುಭವಿಗಳು ದಾಖಲಾಗಿದ್ದಾರೆ ಎಂದು ಸರ್ಕಾರದ ಉತ್ತರದಲ್ಲಿ ತಿಳಿಸಲಾಗಿದೆ.

D.SHIVA BHAT JWELLERS

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ಕ್ಷೇತ್ರದಲ್ಲಿ 11,196 ಮಂದಿಗೆ ಪಿಂಚಣಿ ಸ್ಥಗಿತ: ಶಾಸಕ ರಾಜೇಶ್ ನಾಯ್ಕ್ ಪ್ರಶ್ನೆಗೆ ಡಿಸಿಎಂ ಉತ್ತರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*