ಡ್ರಗ್ಸ್ ವಿರುದ್ಧ ಮುಂದುವರಿದ ಬೇಟೆ – ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರ ಬಂಧನ

ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರ ಬಂಧನ

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮೀಷನರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿ ಆರೋಪಿ ವರ್ಕಾಡಿಯ ಮೊಹಮ್ಮದ್ ಇರ್ಷಾದ್ (30) ನನ್ನು ಬಂಧಿಸಿದ ಪೊಲೀಸರು ₹1.36 ಲಕ್ಷ ಮೌಲ್ಯದ 13.69 ಗ್ರಾಂ MDMA ವಶಪಡಿಸಿಕೊಳ್ಳಲಾಗಿದೆ.

OPTIC WORLD

ಆ.18ರಂದು ರಂದು ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಂಪ್ವೆಲ್ನಿಂದ ನಂತೂರು ಕಡೆಗೆ ತೆರಳುವ ಸರ್ವಿಸ್ ರಸ್ತೆಯ ಬದಿಯಲ್ಲಿ, ಸುಮಾರು 30–35 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ಹೊಂದಿಕೊಂಡು ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಖಚಿತ ಮಾಹಿತಿ ದೊರೆತಿರುತ್ತದೆ.

ಜಾಹೀರಾತು
VNR GOLD

ಈ ಮಾಹಿತಿಯ ಮೇರೆಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ತೆರಳಿ ದಾಳಿ ನಡೆಸಿ, ಸದರಿ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ದಾಳಿ ಸಂದರ್ಭ ಆರೋಪಿಯ ವಶದಿಂದ 13.69 ಗ್ರಾಂ ತೂಕದ MDMA ಮಾದಕ ವಸ್ತು, ಅಂದಾಜು ₹1,36,000 ಮೌಲ್ಯದ MDMA, ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ ₹2,94,500 ಆಗಿರುತ್ತದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪಿ ಆಯುರ್ವೇದ ಆಸ್ಪತ್ರೆಯಲ್ಲಿ ಥೆರಪಿಸ್ಟ್ ಆಗಿದ್ದ ನಿತಿನ್ ಕೃಷ್ಣನ್ (27) ಎಂಬಾತನನ್ನು ಬಂಧಿಸಲಾಗಿದೆ. ಈತ ಕಣ್ಣೂರು ಜಿಲ್ಲೆಯವನು. ಪ್ರಸ್ತುತ ಕೊಂಚಾಡಿಯಲ್ಲಿ ವಾಸಿಸುತ್ತಿದ್ದ

ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪಿ ಈತನಿಂದ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್ ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.

D.SHIVA BHAT JWELLERS

ಆಗಸ್ಟ್ 17ರಂದು ಗಾಂಜಾ ಸೇವನೆ ಮಾಡಿದ ಪ್ರಕರಣದಲ್ಲಿ ಆರೋಪಿತನಾದ ಆಶ್ವಿನ್ ಕ್ಸೇವಿಯರ್ (24) ಎಂಬಾತನನ್ನು ವಿಚಾರಣೆಗೊಳಪಡಿಸಿದ ಸಂದರ್ಭ ಇದರ ಮತ್ತಷ್ಟು ವಿಚಾರಗಳು ಹೊರಬಂದಿವೆ. ಈ ಹಿನ್ನೆಲೆಯಲ್ಲಿ ಆಯುರ್ವೇದ ಕ್ಲಿನಿಕ್ ಒಂದರಲ್ಲಿ ಥೆರಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ನಿತಿನ್ ಕೃಷ್ಣನ್ (27) ಎಂಬಾತನನ್ನು ಪತ್ತೆಹಚ್ಚಿ, ಆತನ ವಶದಲ್ಲಿದ್ದ ರೂ 60,000 ಮೌಲ್ಯದ 1 ಕೆ.ಜಿ. 206 ಗ್ರಾಂ ತೂಕದ ಗಾಂಜಾ, ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ಹಾಗೂ ಮೋಟಾರ್ ಸೈಕಲ್ ಅನ್ನು ಮತ್ತು ಆರೋಪಿಯ ಮೊಬೈಲ್ ಫೋನ್ ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

About the Author

NEWSDESK
www.bantwalnews.comನಲ್ಲಿ ಪ್ರಕಟಗೊಳ್ಳುವ ಜಾಹೀರಾತುಗಳ, ಲೇಖನಗಳ ವಿಚಾರಗಳಿಗೂ ವೆಬ್ ತಾಣಕ್ಕೂ ಸಂಬಂಧವಿಲ್ಲ. ಇದು ಓದುಗರ ಗಮನಕ್ಕೆ. NOTE: : All opinions regarding the advertisments and articles published in bantwalnews and the related topic are those of the author and advertiser, and this has no relation to BantwalNews. Recommendations and suggestions provided here are left for the readers' consideration.

Be the first to comment on "ಡ್ರಗ್ಸ್ ವಿರುದ್ಧ ಮುಂದುವರಿದ ಬೇಟೆ – ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರ ಬಂಧನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*