ದೇಶದಲ್ಲಿ ಯುವಜನತೆಗೆ ಮತದಾನದ ಹಕ್ಕು ಒದಗಿಸಿದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಉಳುವ ರೈತನಿಗೆ ಭೂಮಿಯ ಒಡೆತನ ನೀಡಿದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ನೆನಪು ಜನರ ಹೃದಯದಲ್ಲಿ ಅಚ್ಚಳಿಯದೆ ಉಳಿದಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಹೇಳಿದ್ದಾರೆ.
ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಂಟ್ವಾಳ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ರೋಗಿಗಳಿಗೆ ಗುರುವಾರ ಹಣ್ಣು ಹಂಪಲು ವಿತತರಣೆ ಕಾರ್ಯಕ್ರಮ ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಾಲಕೃಷ್ಣ ಅಂಚನ್, ಚಂದ್ರಶೇಖರ್ ಭಂಡಾರಿ, ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಬೋಳಂತೂರು, ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷರಾದ ಲಾದ್ರು ಮಿನೆಜಸ್, ಎ. ಬಿ. ಅಬ್ದುಲ್ಲ ಕೊಳ್ನಾಡು, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯ ಪಿಯೂಸ್ ಎಲ್.ರಾಡ್ರಿಗಸ್, ಎ ಪಿ ಎಂ ಸಿ ಮಾಜಿ ಅಧ್ಯಕ್ಷ ಕೆ. ಪದ್ಮನಾಭ ರೈ, ಜಿ. ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ತಾ. ಪಂ. ಮಾಜಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಅರೋಗ್ಯ ರಕ್ಷಾ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿ, ಪ್ರಮುಖರಾದ ಚಂದ್ರಶೇಖರ ರೈ ಬೋಳಂತೂರು, ಮಾಹಮ್ಮದ್ ನಂದಾವರ,. ಪ್ರವೀಣ್ ರಾಡ್ರಿಗಸ್, ಸಿರಾಜ್ ಮದಕ, ಮಹಮ್ಮದ್ ಮಂಚಿ, ಸಂದೇಶ್ ಶೆಟ್ಟಿ ವಿಟ್ಲಪಡ್ನೂರು , ರಮ್ಲಾನ್ ಅಮುಂಜೆ ಮತ್ತಿತರರು ಉಪಸ್ಥಿತರಿದ್ದರು. ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಬೋಳಂತೂರು ಸ್ವಾಗತಿಸಿ, ಎ.ಬಿ. ಅಬ್ದುಲ್ಲಾ ವಂದಿಸಿದರು.