ದೇವರಾಜ ಅರಸು ಅವರು ಕತ್ತಲಲ್ಲಿ ಬೆಳಕು ತಂದವರು: ಬಂಟ್ವಾಳದಲ್ಲಿ ಉಪನ್ಯಾಸಕಿ ಡಾ. ಪುಟ್ಟಲಕ್ಷ್ಮಮ್ಮ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 11ನೇ ಜನ್ಮದಿನಾಚರಣೆ ಗುರುವಾರ ಬಂಟ್ವಾಳ ತಾಪಂ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ತಾಲೂಕು ಆಡಳಿತ ಆಶ್ರಯದಲ್ಲಿ ನಡೆಯಿತು

OPTIC WORLD

ತಹಶೀಲ್ದಾರ್ ಮಂಜುನಾಥ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಅರಸು ಅವರ ತತ್ವಾದರ್ಶಗಳ ಪಾಲನೆಗೆ ಕರೆ ನೀಡಿದರು.

ಬಂಟ್ವಾಳ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ. ಪೂಜಾರಿ ಅವರು ಅರಸು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಬಡವರು ಹಾಗೂ ಹಿಂದುಳಿದ ವರ್ಗಗಳ ಏಳಿಗೆಗೆ ಉಳುವವನೇ ಹೊಲದೊಡೆಯ ಎಂಬ ತತ್ವದಡಿ ಭೂಮಿ ದೊರಕಿಸಲು ಹಾಗೂ ಸಾಮಾಜಿಕ ನ್ಯಾಯ ಒದಗಿಸಲು ಶ್ರಮಿಸಿದವರು ದೇವರಾಜ ಅರಸರು ಎಂದರು.

ಜಾಹೀರಾತು
VNR GOLD

ಕಾಲೇಜು ಉಪನ್ಯಾಸಕಿ ಡಾ. ಪುಟ್ಟಲಕ್ಷ್ಮಮ್ಮ ವಿಶೇಷ ಉಪನ್ಯಾಸ ನೀಡಿ, ಭೂಮಿ ಹಕ್ಕು ಕಳೆದುಕೊಂಡವರಿಗೆ ಪರಿಹಾರ ಸಹಿತ ಹಲವು ಸುಧಾರಣೆಗಳನ್ನು ಭೂಸುಧಾರಣೆ ಕಾಯ್ದೆ ಮೂಲಕ ಜಾರಿಗೆ ತಂದರು. ಜೀತಪದ್ಧತಿ ನಿರ್ಮೂಲನೆ ಮಾಡುವ ಮೂಲಕ ರಕ್ತರಹಿತ ಕ್ರಾಂತಿ ಮಾಡಿದ್ದಾರೆ. ಮಂಗಳೂರು ಹಾಸನ ರೈಲ್ವೆ ಸಂಚಾರ ಅರಸು ಅವರ ಕಾಲದಲ್ಲಿ ಆಗಿತ್ತು. ವೃದ್ಧಾಪ್ಯ ವೇತನ, ಪಿಂಚಣಿ ಸಹಿತ ಹಲವು ಕಲ್ಯಾಣ ಕಾರ್ಯಕ್ರಮ ಜಾರಿಗೆ ತಂದ ಅರಸರು ಕತ್ತಲಲ್ಲಿ ಬೆಳಕು ತಂದವರು ಎಂದರು.

ಕಾರ್ಯಕ್ರಮದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ, ಅರಸು ಅವರ ಕುರಿತು ನಡೆದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ಕುಮಾರ್ ರೈ ಉಪಸ್ಥಿತರಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಶೇಷಗಿರಿ ನಾಯಕ್ ಸ್ವಾಗತಿಸಿದರು.

D.SHIVA BHAT JWELLERS

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ದೇವರಾಜ ಅರಸು ಅವರು ಕತ್ತಲಲ್ಲಿ ಬೆಳಕು ತಂದವರು: ಬಂಟ್ವಾಳದಲ್ಲಿ ಉಪನ್ಯಾಸಕಿ ಡಾ. ಪುಟ್ಟಲಕ್ಷ್ಮಮ್ಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*