ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆಮಾಡ ಎಂಬಲ್ಲಿ ಹಾಡಹಗಲೇ ಬೈಕ್ ನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ತಡೆದು ತಲವಾರು ತೋರಿಸಿ, ಬೆದರಿಸಿ, ಅವರ ಬಳಿಯಿದ್ದ 8.5 ಲಕ್ಷ ರೂ ನಗದನ್ನು ದೋಚಿದ ಘಟನೆ ಗುರುವಾರ ನಡೆದಿದೆ.
OPTIC WORLD
ಪೊಲೀಸರು ನೀಡಿರುವ ಪ್ರಕಟಣೆಯ ಪ್ರಕಾರ ವಿವರ ಹೀಗಿದೆ.
ಮಂಗಳೂರಿನ ಕಣ್ಣೂರು ಎಂಬಲ್ಲಿರುವ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮಯ್ಯದಿ (40) ಎಂಬವರು, ತನ್ನ ಸಂಸ್ಥೆಯ ವ್ಯವಹಾರದ ಹಣವನ್ನು ವಿವಿಧ ಅಂಗಡಿಗಳಿಂದ ಸಂಗ್ರಹಿಸಿಕೊಂಡು ಬರುವ ಸಲುವಾಗಿ ಗುರುವಾರ ಬೈಕ್ ನಲ್ಲಿ ತೆರಳಿದ್ದರು. ಹಲವು ಅಂಗಡಿಗಳಿಂದ ನಗದು ಹಣವನ್ನು ಸಂಗ್ರಹಿಸಿ, ಬಂಟ್ವಾಳ ಕಕ್ಕೆಪದವಿನಿಂದ ಪಾಣೆಮಂಗಳೂರಿಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ, ಮಧ್ಯಾಹ್ನ ಸುಮಾರು 1 ಗಂಟೆಯ ಹೊತ್ತಿಗೆ, ಬಂಟ್ವಾಳ ಮಣಿನಾಲ್ಕೂರು ಮುಲ್ಕಾಜೆಮಾಡ ಎಂಬಲ್ಲಿ ತಲುಪಿದ ವೇಳೆ ಘಟನೆ ನಡೆದಿದೆ.
ಜಾಹೀರಾತು
VNR GOLD
ಎರಡು ಬೈಕ್ ಗಳಲ್ಲಿ ಬಂದ ನಾಲ್ಕು ಜನ ಅಪರಿಚಿತರು, ಮಯ್ಯದಿಯವರಿಗೆ ತಲವಾರು ತೋರಿಸಿ, ಬೆದರಿಸಿ ಅವರ ಬಳಿಯಿದ್ದ 8,52,000 ರೂ ನಗದು ಹಣವನ್ನು ಸುಲಿಗೆ ನಡೆಸಿ ಪರಾರಿಯಾಗಿರುತ್ತಾರೆ ಎಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಹಾಡಹಗಲೇ ತಲವಾರು ತೋರಿಸಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯಿಂದ 8.5 ಲಕ್ಷ ರೂ ಸುಲಿಗೆ"
Be the first to comment on "ಹಾಡಹಗಲೇ ತಲವಾರು ತೋರಿಸಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯಿಂದ 8.5 ಲಕ್ಷ ರೂ ಸುಲಿಗೆ"