ಬಂಟ್ವಾಳ

ಸಂಘಟನೆಯಿಂದ ಪ್ರಗತಿ ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶ : ಬೇಬಿ ಕುಂದರ್

ಬ್ರಹ್ಮಶ್ರೀ ನಾರಾಯಣ ಗುರುಗಳು ಯಾವುದೇ ಸಮುದಾಯಕ್ಕೆ ಸೀಮಿತವಾಗಿರಲಿಲ್ಲ. ಜಾತಿ-ಭೇದಗಳನ್ನು ಮೀರಿ ಎಲ್ಲರನ್ನೂ ಒಗ್ಗೂಡಿಸುವುದು ಅವರ ಆಶಯವಾಗಿತ್ತು. ಸಂಘಟನೆಯಿಲ್ಲದೆ ಯಾವುದೇ ಸಮುದಾಯದ ಪ್ರಗತಿ ಸಾಧ್ಯವಿಲ್ಲ ಎಂಬುದು ಗುರುಗಳ ಸಂದೇಶವಾಗಿತ್ತು ಎಂದು  ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್ ಹೇಳಿದರು.

VNR GOLD

ಬಂಟ್ವಾಳ ಗಾಣದಪಡ್ಪುವಿನ ಗುರುಮಂದಿರದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ವತಿಯಿಂದ ನಡೆದ ಗುರುತತ್ವವಾಹಿನಿ ಮಾಲಿಕೆ 74 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂಘಟನೆ ಹಾಗೂ ಸಾಮೂಹಿಕ ಪ್ರಯತ್ನಗಳ ಮೂಲಕ ಸಮಾಜದ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಗೆ ಮತ್ತಷ್ಟು ವೇಗ ನೀಡಬಹುದು ಎಂದು ಅವರು ಅಭಿಪ್ರಾಯಪಟ್ಟರು.

ಜಾಹೀರಾತು
OPTIC WORLD

ಯುವವಾಹಿನಿ ಬಂಟ್ವಾಳ ಘಟಕದ ಉಪಾಧ್ಯಕ್ಷ ನಿಕೇಶ್ ಕೋಟ್ಯಾನ್, ಕೋಶಾಧಿಕಾರಿ ಪ್ರಜಿತ್ ಅಮೀನ್, ಆಂತರಿಕ ಲೆಕ್ಕ ಪರಿಶೋಧಕ ನವೀನ್ ಲೋರಟ್ಟೋ, ನಿರ್ದೇಶಕರಾದ ಶೈಲೇಶ್ ಕುಚ್ಚಿಗುಡ್ಡೆ, ಯೋಗೀಶ್ ಕಲ್ಲಡ್ಕ, ಸುನೀತಾ ಮಾರ್ನಬೈಲು, ಸದಸ್ಯರಾದ ಪ್ರಶಾಂತ್ ಎರಮಲೆ, ಯಶೋಧರ ಕಡಂಬಳಿಕೆ, ಯತೀಶ್ ಬೊಳ್ಳಾಯಿ, ನಾರಾಯಣ ಪಲ್ಲಿಕಂಡ, ಉದಯ್ ಮೇನಾಡ್ ಹಾಗೂ ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ., ಗಣೇಶ್ ಪೂಂಜಾರೆ ಕೊಡಿ, ನಾಗೇಶ್ ಪೊನ್ನೋಡಿ, ಶಿವಾನಂದ ಎಂ. ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು, ಸದಸ್ಯರು ಹಾಗೂ ಬಿಲ್ಲವ ಸಂಘದ ಸದಸ್ಯರು ಉಪಸ್ಥಿತರಿದ್ದರು. ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಮಹೇಶ್ ಬೊಳ್ಳಾಯಿ ಧನ್ಯವಾದ ಅರ್ಪಿಸಿದರು. ಘಟಕದ ಅಧ್ಯಕ್ಷ ಕಿರಣ್ ಪೂಂಜಾರೆ ಕೊಡಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಭಜನಾ ಸಂಕೀರ್ತನೆಯಲ್ಲಿ ಸಾತ್ವಿಕ್ ದೇರಾಜೆ ಹಾಗೂ ಕಾರ್ತಿಕ್ ದೇರಾಜೆ ಸಂಗೀತ ಸೇವೆ ಸಲ್ಲಿಸಿದರು. ಆತಿಥ್ಯ ವಹಿಸಿದ್ದ ತಿಲಕ್ ಶಾಂತಿ ಅವರು ಕೃತಜ್ಞತೆ ಸಲ್ಲಿಸಿದರು.

D.SHIVA BHAT JWELLERS
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.