ಬಂಟ್ವಾಳ: ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘ ತನ್ನ 2025–26ನೇ ಸಾಲಿನ ಸಮಗ್ರ ಕಾರ್ಯಚಟುವಟಿಕೆ ಹಾಗೂ ಉತ್ತಮ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾಗಿದೆ.
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ, ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿ ಹಾಗೂ ಸ್ಮರಣಿಕೆಯನ್ನು ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ಕೆ. ಪದ್ಮನಾಭ ಕೊಟ್ಟಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲ ಕೆ. ಅವರು ಸ್ವೀಕರಿಸಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷರಾದ ಲೋಕಾನಂದ, ನಿರ್ದೇಶಕರಾದ ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು