ಕೊಯಿಲ ಯಕ್ಷ ಕೌಸ್ತುಭ ನಾಟ್ಯ ಅಧ್ಯಯನ ಕೇಂದ್ರ: ಯಕ್ಷ ಸಂಭ್ರಮ, ಸಾಧಕರಿಗೆ ಪ್ರಶಸ್ತಿ, ಸನ್ಮಾನ

ಸಾಧಕರಿಗೆ ಸನ್ಮಾನ

ಬಂಟ್ವಾಳ ತಾಲೂಕಿನ ರಾಯಿ ಕೊಯಿಲ ಅರಳ ಗ್ರಾಮಗಳನ್ನೊಳಗೊಂಡ ಯಕ್ಷಕೌಸ್ತುಭ ನಾಟ್ಯ ಅಧ್ಯಯನ ಕೇಂದ್ರ ಕೊಯಿಲ  ವತಿಯಿಂದ ಕರ್ನಾಟಕ ಯಕ್ಷಗಾನ ಅಕಾಡೆಮಿ ಸಹಯೋಗದಲ್ಲಿ ಯಕ್ಷಸಂಭ್ರಮ 2026, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಪ್ರಶಸ್ತಿ,ಸನ್ಮಾನ ಕಾರ್ಯಕ್ರಮ ರಾಯಿ ಶ್ರೀಯಾ ಗಾರ್ಡನ್ ಸಭಾಂಗಣದಲ್ಲಿ ನಡೆಯಿತು.’

ಉದ್ಘಾಟನೆ:

‘ಯಕ್ಷ ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಯಿ ಶ್ರೀ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ಡಿ. ರಾಮಚಂದ್ರ ಭಟ್ ದೈಲ, ಯಕ್ಷಗಾನ ಸಂಸ್ಕೃತಿಯ ಪ್ರತೀಕ ಎಂದರು. ಮಾವಂತೂರು ಶ್ರೀ ಮಹಾ ಗಣಪತಿ ದೇವಳದ ಆಡಳಿತ ಮೊಕ್ತೇಸರ ಎಂ.ಪದ್ಮರಾಜ ಬಲ್ಲಾಳ್ ಮಾವಂತೂರು ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಯಿ ಗ್ರಾ. ಪಂ. ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು, ಸಿದ್ದಕಟ್ಟೆ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಗದೀಶ್ ಕೊಯಿಲ, ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವಲಯ ಸೇನಾನಿ ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ, ಅರಳ ನವಶಕ್ತಿ ಯುವಕ ಮಂಡಲ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ, ಸಿದ್ದಕಟ್ಟೆ ಸಿ. ಎ. ಬ್ಯಾಂಕ್ ನಿರ್ದೇಶಕ ಚಂದ್ರಶೇಖರ ಶೆಟ್ಟಿ ಪಂಬದಗದ್ದೆ, ಉದ್ಯಮಿ ದೇವಪ್ಪ ಕರ್ಕೇರ ನೆಕ್ಕರೆಗುಳಿ, ಬದನಡಿ ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಸಂಚಾಲಕ ರವೀಂದ್ರ ಪೂಜಾರಿ, ನಿವೃತ್ತ ಮುಖ್ಯ ಶಿಕ್ಷಕ ಸೋಮಪ್ಪ ಮಡಿವಾಳ ರಾಯಿ,ರಾಯಿ ನಮ್ಮ ಜವನೆರ್ ಸೇವಾ ಟ್ರಸ್ಟ್ ಅಧ್ಯಕ್ಷ ದಿನೇಶ್ ಗೌಡ ದೈಲ, ಪತ್ರಕರ್ತರಾದ ರತ್ನದೇವ್ ಪುಂಜಾಲಕಟ್ಟೆ, ಮೋಹನ್ ಕೆ. ಶ್ರೀಯಾನ್ ರಾಯಿ, ಅರಳ ಶ್ರೀ ಗರುಡ ಮಹಾಕಾಳಿ ಭಜನಾ ಮಂಡಳಿ ಅಧ್ಯಕ್ಷ ಸುದರ್ಶನ್ ಶೆಟ್ಟಿ, ಯಕ್ಷಗುರು ಪ್ರೇಮ್ ರಾಜ್ ಕೊಯಿಲ ಮತ್ತಿತರರು ಇದ್ದರು. ಶಿಲ್ಪಾ ಎಸ್. ಅಂಚನ್ ಸ್ವಾಗತಿಸಿ, ನಿರಂಜನ್ ನಾಯ್ಕ್ ವಂದಿಸಿದರು. ಶಾಜಲ್ ರಾಯಿ ಕಾರ್ಯಕ್ರಮ ನಿರೂಪಿದರು. ಸಮಾರೋಪದಲ್ಲಿ ಶ್ರೀ ಕ್ಷೇತ್ರ ಕಟೀಲಿನ ಆನುವಂಶಿಕ ಆಸ್ರಣ್ಣರಾದ ವೇ.ಮೂ.ಹರಿನಾರಾಯಣದಾಸ ಆಸ್ರಣ್ಣ ಆಶೀರ್ವಚನ ನೀಡಿ ಮಾತನಾಡಿದರು.

ಜಾಹೀರಾತು

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ,ನಮ್ಮ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಅದ್ಭುತ ಕಲೆಯಾದ ಯಕ್ಷಗಾನಕ್ಕೆ ಎಲ್ಲರೂ ಪ್ರೋತ್ಸಾಹ ನೀಡಬೇಕು. ಈ ನಿಟ್ಟಿನಲ್ಲಿ ಯಕ್ಷಗಾನ ತರಬೇತಿ ಕೇಂದ್ರಗಳ ಕಾರ್ಯ ಅಭಿನಂದನೀಯ ಎಂದು ಹೇಳಿದರು.

ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಕ್ಷಗಾನವೆಂಬುದು ಅನರ್ಘ್ಯ ಕಲಾವಿದರೆಂಬ ರತ್ನಗಳಿಂದ ಕೂಡಿದ ಸಮುದ್ರ. ಸಾಧನೆಯಿಂದ ಉತ್ತಮ ಕಲಾವಿದರಾಗ ಬೇಕು. ಯಕ್ಷಗಾನ ಆಸಕ್ತರಿಗೆ, ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ದೊರಕುತ್ತದೆ ಎಂದರು.

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ರವಿಶಂಕರ ಶೆಟ್ಟಿ ಬಡಾಜೆ, ಮಾವಂತೂರು ಶ್ರೀ ಬಲವಂಡಿ ಕ್ಷೇತ್ರದ ಗಡಿ ಪ್ರಧಾನರಾದ ದುರ್ಗಾದಾಸ್ ಶೆಟ್ಟಿ ಮಾವಂತೂರು, ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ರಾಘವ ಗೇರುಕಟ್ಟೆ, ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ದಿನೇಶ್ ಭಟ್ ದೈಲ, ಹೊಕ್ಕಾಡಿಗೋಳಿ ಕಂಬಳ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಸಿದ್ದಕಟ್ಟೆ ಪ್ರಾಕೃತಿಕ ಕೃಷಿ.ಸಹಕಾರ.ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಬ್ಯಾಂಕ್ ಅಧಿಕಾರಿ ಸಂತೋಷ್ ಕುಮಾರ್ ಚೌಟ, ಪ್ರಗತಿಪರ ಕೃಷಿಕ ಚಂದ್ರಶೇಖರ ಗೌಡ ಕಾರಂಬಡೆ, ಗುತ್ತಿಗೆದಾರ ಪ್ರವೀಣ್ ಅಂಚನ್, ರಾಯಿ ಶ್ರೀ ಮಹಾಲಿಂಗೇಶ್ವರ ಭಜನ ಮಂಡಳಿ ಅಧ್ಯಕ್ಷ ಸಂತೋಷ್ ಶಿವನಗರ, ಕೊಯಿಲ ಗುರುಗಣೇಶ್ ಭಜನ ಮಂಡಳಿ ಅಧ್ಯಕ್ಷ ಕೀರ್ತನ್, ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ, ಸಂಘದ ಸಂಚಾಲಕ ಸಂತೋಷ್ ಅಂಚನ್ ಕೊಯಿಲ, ಭಾಗವತ ಧನಂಜಯ ಕೊಯಿಲ, ಶ್ರುತಿ ಪ್ರೇಮ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.

ಈ ಸಂದರ್ಭ ಯಕ್ಷಗುರುಗಳಾದ ಪ್ರೇಮ್ ರಾಜ್ ಕೊಯಿಲ ಅವರಿಗೆ ಯಕ್ಷಕೌಸ್ತುಭ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾಧಕರಾದ ಸರಪಾಡಿ ಅಶೋಕ ಶೆಟ್ಟಿ, ರವಿಚಂದ್ರ ಕನ್ನಡಿಕಟ್ಟೆ, ನಿಖಿಲ್ ಕೊಯಿಲ, ಹರಿಪ್ರಸಾದ್ ರಾವ್, ನವೀನ್ ಚಂದ್ರ ಅಂಚನ್,ಆನಂದ ಪಡ್ರೆ, ದುರ್ಗಾದಾಸ್ ಶೆಟ್ಟಿ ಮಾವಂತೂರು, ವಸಂತ ಅಣ್ಣಳಿಕೆ,ಸಂತೋಷ್ ಅಂಚನ್, ದಾಸಪ್ಪ ಪರವ, ರಾಘವ ಗೇರುಕಟ್ಟೆ , ಧನಂಜಯ ಕೊಯಿಲ ಅವರನ್ನು ಸನ್ಮಾನಿಸಲಾಯಿತು. ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಸಲಾಯಿತು.
ಸಂಘದ ಅಧ್ಯಕ್ಷ ಚಂದ್ರಶೇಖರ ಗೌಡ ಮತ್ತಾವು ಸ್ವಾಗತಿಸಿ, ಪ್ರಸ್ತಾವಿಸಿದರು. ಪ್ರೇಮ್ ರಾಜ್ ಕೊಯಿಲ ವಂದಿಸಿದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.        

ಮಧ್ಯಾಹ್ನ ಚೌಕಿಪೂಜೆ ಬಳಿಕ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ರಾಮಚಂದ್ರ ಭಟ್ ದೈಲ ಕಾರ್ಯಕ್ರಮ ಉದ್ಘಾಟಿಸಿದರು. ಮಾವಂತೂರು ಶ್ರೀ ಮಹಾ ಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ಪದ್ಮರಾಜ ಬಲ್ಲಾಳ್ ಅವರು ಅಧ್ಯಕ್ಷತೆ ವಹಿಸಿದ್ದರು. ವಿವಿಧ ಕ್ಷೇತ್ರಗಳ ಗಣ್ಯರು ಅತಿಥಿಗಳಾಗಿ ಭಾಗವಹಿಸಿದ್ದರು. ನಂತರ ಸಂಸ್ಥೆಯ ವಿದ್ಯಾರ್ಥಿಗಳಿಂದ ಶಶಿಪ್ರಭಾ ಪರಿಣಯ-ಪ್ರಮೀಳಾರ್ಜುನ ಯಕ್ಷಗಾನ ಪ್ರದರ್ಶನ ನಡೆಯಿತು.  

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕೊಯಿಲ ಯಕ್ಷ ಕೌಸ್ತುಭ ನಾಟ್ಯ ಅಧ್ಯಯನ ಕೇಂದ್ರ: ಯಕ್ಷ ಸಂಭ್ರಮ, ಸಾಧಕರಿಗೆ ಪ್ರಶಸ್ತಿ, ಸನ್ಮಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*