ಬಂಟ್ವಾಳ: 2025-26ನೇ ಸಾಲಿನ ಸಾಧನೆಯನ್ನು ಗುರುತಿಸಿ ಬಂಟ್ವಾಳ ಕೃಷಿ ಉತ್ಪನ್ನ ಮಾರಾಟ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಂಗಳೂರಿನಲ್ಲಿ ನಡೆದ ಬ್ಯಾಂಕ್‌ನ ಮಹಾಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ರವೀಂದ್ರ ಕಂಬಳಿ ಅವರಿಗೆ ಪ್ರಶಸ್ತಿ ಹಾಗೂ ಸ್ಮರಣಿಕೆಯನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಸಂಘದ ಸಿಇಒ ಧರ್ಮಪಾಲ ಭಂಡಾರಿ, ಉಪಾಧ್ಯಕ್ಷರು ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.