ಕೆಎಸ್‌ಆರ್‌ಟಿಸಿ ಬಿ.ಸಿ.ರೋಡ್ ಡಿಪೋದಲ್ಲಿ ಸಿಬ್ಬಂದಿಗಳಿಗಾಗಿ ಸಿಪಿಆರ್ ಹಾಗೂ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮ ನಡೆಯಿತು.
ತುರ್ತು ಸಂದರ್ಭದಲ್ಲಿ ಪ್ರಯಾಣಿಕರು ಹಾಗೂ ಸಾರ್ವಜನಿಕರಿಗೆ ತಕ್ಷಣದ ನೆರವು ನೀಡುವ ಉದ್ದೇಶದಿಂದ ಆಯೋಜಿಸಲಾದ ಈ ತರಬೇತಿ ಕಾರ್ಯಕ್ರಮದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆಯ ಕಂಕನಾಡಿ, ತುಂಬೆ, ನರ್ಸಿಂಗ್ ಕಾಲೇಜಿನ ವೈದ್ಯರು ಮತ್ತು ಸಿಬ್ಬಂದಿ ಭಾಗವಹಿಸಿ ತರಬೇತಿ ನೀಡಿದರು.
ಫಾದರ್ ಮುಲ್ಲರ್ ಆಸ್ಪತ್ರೆ ಕಂಕನಾಡಿಯ ಡಾ. ಅನಂತ್ ಕೃಷ್ಣ ಸೋಮಯಾಜಿ, , ಡಾ. ಕಾರ್ತಿಕ್ ಹಾಗೂ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಿನ ಪ್ರಿನ್ಸಿಪಾಲ್ ಡಾ. ರೀನಾ ಫ್ರಾಂಕ್ ಭಾಗವಹಿಸಿ, ಸಿಪಿಆರ್, ಪ್ರಥಮ ಚಿಕಿತ್ಸೆ ಹಾಗೂ ತುರ್ತು ಪರಿಸ್ಥಿತಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಿಬ್ಬಂದಿಗೆ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ತರಬೇತಿ ನೀಡಿದರು.
ಜಾಹೀರಾತು
ಕಾರ್ಯಕ್ರಮದ ಸಮನ್ವಯವನ್ನು ಫಾದರ್ ಮುಲ್ಲರ್ ಆಸ್ಪತ್ರೆ, ತುಂಬೆಯ ಪಿಆರ್‌ಒ ತ್ರಿವೇಣಿ ವಹಿಸಿದ್ದರು. ಕೆಎಸ್‌ಆರ್‌ಟಿಸಿ ಬಿ.ಸಿ.ರೋಡ್ ಡಿಪೋ ಮ್ಯಾನೇಜರ್ ಪಿ. ಇಸ್ಮಾಯಿಲ್ ನೇತೃತ್ವದಲ್ಲಿ ಹಾಗೂ ಎಡಬ್ಲ್ಯುಎಸ್ ವಿನಯಾ ಜಿ. ರೈ ಸಹಕಾರದೊಂದಿಗೆ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಪ್ರಭಾವತಿ ನಿರೂಪಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕೆ.ಎಸ್.ಆರ್.ಟಿ.ಸಿ. ಬಿ.ಸಿ.ರೋಡ್ ಡಿಪೊದಲ್ಲಿ ಸಿಪಿಆರ್, ಪ್ರಥಮ ಚಿಕಿತ್ಸೆ ತರಬೇತಿ"
Be the first to comment on "ಕೆ.ಎಸ್.ಆರ್.ಟಿ.ಸಿ. ಬಿ.ಸಿ.ರೋಡ್ ಡಿಪೊದಲ್ಲಿ ಸಿಪಿಆರ್, ಪ್ರಥಮ ಚಿಕಿತ್ಸೆ ತರಬೇತಿ"