ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ತನ್ನ ಆರ್ಥಿಕ ವ್ಯವಹಾರದಲ್ಲಿ ಗಣನೀಯ ಸಾಧನೆ ಮಾಡಿರುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಹಾಗೂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಯವರನ್ನು ಸನ್ಮಾನಿಸಲಾಯಿತು.
ದ. ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಸಾಧನ ಪ್ರಶಸ್ತಿ ನೀಡಿದರು. ಈ ಸಂದರ್ಭ ಎಸ್. ಸಿ. ಡಿ. ಸಿ. ಸಿ. ಬ್ಯಾಂಕ್ ನಿರ್ದೇಶಕರಾದ ಟಿ. ಜಿ. ರಾಜಾರಾಮ್ ಭಟ್, ದೇವಿಪ್ರಸಾದ್ ಶೆಟ್ಟಿ, ಶಶಿಕುಮಾರ್ ರೈ, ಜಯರಾಮ ರೈ, ಸದಾಶಿವ ಉಳ್ಳಾಲ್ ಸೇರಿದಂತೆ ಎಲ್ಲಾ ನಿರ್ದೇಶಕರು,ಸಹಕಾರ ಸಂಘಗಳ ಉಪ ನಿಭಂದಕರಾದ ಎಚ್. ಎನ್.ರಮೇಶ್, ನಬಾರ್ಡ್ ಅಧಿಕಾರಿಗಳು ಉಪಸ್ಥಿತರಿದ್ದರು