ಬಂಟ್ವಾಳ

ಬಂಟ್ವಾಳ: ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ–ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯುವುದೇ ಅವರಿಗೆ ಸಲ್ಲಿಸುವ ಶ್ರೇಷ್ಠ ಗುರುದಕ್ಷಿಣೆಯಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ಅವರು ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

OPTIC WORLD

ಶುಕ್ರವಾರ ಬಂಟ್ವಾಳ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ತಾಲೂಕು ಕಚೇರಯಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಾಹೀರಾತು
VNR GOLD

ಬಂಟ್ವಾಳ ನಗರ ಯೋಜನೆ ಪ್ರಾಧಿಕಾರ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯಂಥ ಕಾರ್ಯಕ್ರಮಗಳು ನಾಲ್ಕು ಗೋಡೆಗಳ ಮಧ್ಯೆ ನಡೆಯುವ ಬದಲು ಸಮಾಜದ ಹೆಚ್ಚಿನ ಜನರನ್ನು ತಲುಪಿಸುವಂತಾಗಬೇಕು ಎಂದರು.

ಬಂಟ್ವಾಳ ತಹಸೀಲ್ದಾರ್ ಮಂಜುನಾಥ್ ಅವರು ಮಾತನಾಡಿ, ಮುಂದಿನ ದಿನಗಳಲ್ಲಿ ಮಕ್ಕಳಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ, ಆದರ್ಶ ಹಾಗೂ ಸಮಾಜ ಸುಧಾರಣೆಯ ಸಂದೇಶಗಳನ್ನು ಪರಿಚಯಿಸುವ ಕಾರ್ಯ ಆಗಬೇಕಿದೆ ಎಂದರು.

D.SHIVA BHAT JWELLERS

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಮಾತನಾಡಿ ಶುಭ ಹಾರೈಸಿದರು.

ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ, ಯುವವಾಹಿನಿ ಅಧ್ಯಕ್ಷ ಕಿರಣ್ ಪೂಜಾರಿ ಪೂಂಜರಕೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಿಲ್ಲವ ಸಮಾಜ ಸೇವಾ ಸಂಘದ ತಾಲೂಕು ಪದಾಧಿಕಾರಿಗಳು, ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಸಹಿತ ಪ್ರಮುಖರು ಕಾರ್ಯಕ್ರಮದಲ್ಲಿ ಹಾಜರಿದ್ದರು. ತಾಲೂಕು ಕಚೇರಿ ಸಿಬ್ಬಂದಿ ಜನಾರ್ದನ ವಂದಿಸಿದರು. ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.